ಕರ್ನಾಟಕ

ಸ್ಯಾಂಡಲ್‍ವುಡ್‍ನ ಹಿರಿಯ ಚಿತ್ರ ನಿರ್ದೇಶಕ ಕೆ.ವಿ ರಾಜು ವಿಧಿವಶ

Pinterest LinkedIn Tumblr

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕೆ.ವಿ.ರಾಜು ಅವರು ಶುಕ್ರವಾರ ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣ ಬೆಂಗಳೂರಿನ ರಾಜಾಜಿನಗರದ ತಮ್ಮ ನಿವಾಸದಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ ಕೆ.ವಿ ರಾಜು ಅವರು ಇಂದು ಬೆಳಗ್ಗೆ 8 ಗಂಟೆಯ ಸುಮಾರಿಗೆ ವಿಧಿವಶರಾಗಿದ್ದಾರೆ.

ರಾಜಾಜಿನಗರದ ನಿವಾಸದಲ್ಲಿ ಕೆವಿ ರಾಜು ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಬಳಿಕ ಹರಿಶ್ಚಂದ್ರ ಘಾಟ್ ನಲ್ಲಿ ಅಂತ್ಯ ಸಂಸ್ಕಾರ ಮಾಡಲಾಗುತ್ತದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ಕೆ.ವಿ ರಾಜು ಅವರು ಹುಲಿಯಾ, ಬೆಳ್ಳಿ ಮೋಡ, ಇಂದ್ರಜಿತ್, ಬೆಳ್ಳಿ ಕಾಲುಂಗುರ, ಯುದ್ಧಕಾಂಡ ಸೇರಿ ಹಲವು ಚಿತ್ರಗಳನ್ನು ನಿರ್ದೇಶಿಸಿದ್ದರು. ಅಲ್ಲದೆ ಬಾಲಿವುಡ್ ನಲ್ಲಿ ಅಮಿತಾಬ್ ಬಚ್ಚನ್ ಅಭಿನಯದ ಚಿತ್ರವನ್ನೂ ಅವರು ನಿರ್ದೇಶಿಸಿದ್ದರು.

Comments are closed.