ಕರಾವಳಿ

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಕಾಪು ಪುರಸಭಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ

Pinterest LinkedIn Tumblr

ಉಡುಪಿ: ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ-2021 ಕ್ಕೆ ಸಂಬಂಧಿಸಿದಂತೆ, ಜಿಲ್ಲೆಯ ಕಾಪು ಪುರಸಭಾ ವ್ಯಾಪ್ತಿಯಲ್ಲಿ ಡಿಸೆಂಬರ್ 27 ರಂದು ಮತದಾನ ನಡೆಯಲಿದೆ.

ಈ ಹಿನ್ನೆಲೆ, ಸಾರ್ವಜನಿಕ ಹಿತದೃಷ್ಟಿಯಿಂದ ಶಾಂತಿ ಪಾಲನೆ, ಕಾನೂನು ಸುವ್ಯವಸ್ಥೆ ಮತ್ತು ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ, ರಾಜ್ಯ ಅಬಕಾರಿ ಕಾಯ್ದೆ ಅನ್ವಯ ಡಿ. 25 ರ ಸಂಜೆ 5 ಗಂಟೆಯಿಂದ ಡಿ. 27 ರ ಸಂಜೆ 5 ರ ವರೆಗೆ ಎಲ್ಲಾ ರೀತಿಯ ಮದ್ಯದಂಗಡಿ, ಮದ್ಯ ಮಾರಾಟ ಡಿಪೋ, ಮದ್ಯ ತಯಾರಿಕಾ ಡಿಸ್ಟಿಲರಿ, ಸ್ಟಾರ್ ಹೋಟೆಲ್, ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಹೋಟೆಲ್, ಕ್ಲಬ್‌ಗಳಲ್ಲಿ ಮದ್ಯ ಮಾರಾಟ ಹಾಗೂ ಸರಬರಾಜು ಮಾಡುವುದನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ. ಆದೇಶಿಸಿರುತ್ತಾರೆ.

ಕಾಪು ಪುರಸಭಾ ವ್ಯಾಪ್ತಿಯಲ್ಲಿ ಸಂತೆ, ಜಾತ್ರೆ ನಿಷೇಧ…
ಮತದಾನ ನಡೆಯಲಿರುವ ಹಿನ್ನೆಲೆ, ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಹಾಗೂ ಸಾರ್ವಜನಿಕರು ಮತ ಚಲಾಯಿಸಲು ಅನುಕೂಲವಾಗುವಂತೆ, ಕಾಪು ಪುರಸಭಾ ವ್ಯಾಪ್ತಿಯಲ್ಲಿ ಚುನಾವಣಾ ದಿನದಂದು ನಡೆಯುವ ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ.

Comments are closed.