ಕರಾವಳಿ

ಮುಸ್ಲಿಮರನ್ನ, ಕ್ರೈಸ್ತರನ್ನ ಘರ್ ವಾಪಸಿ ಮಾಡದೆ ಬೇರೆ ದಾರಿಯಿಲ್ಲ: ಸಂಸದ ತೇಜಸ್ವಿ ಸೂರ್ಯ

Pinterest LinkedIn Tumblr

ಉಡುಪಿ: ಮುಸ್ಲಿಮರನ್ನ, ಕ್ರೈಸ್ತರನ್ನ ಘರ್ ವಾಪಸಿ ಮಾಡದೆ ಬೇರೆ ದಾರಿಯಿಲ್ಲ ಎಂದು ಉಡುಪಿಯಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ನೀಡಿದ್ದಾರೆ.

ಉಡುಪಿಯಲ್ಲಿ ಪರ್ಯಾಯ ಅದಮಾರು ಮಠದ ವಿಶ್ವರೂಪಂ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಈ ಹೇಳಿಕೆ‌ ನೀಡಿದರು.

ಮತಾಂತರವಾಗಿ ಪಾಕಿಸ್ತಾನಕ್ಕೆ ಹೋದವರನ್ನೂ ಹಿಂದೂ ಧರ್ಮಕ್ಕೆ ಕರೆತರಬೇಕು. ಚೀನಾ, ಜಪಾನ್ ಗೆ ಮತಾಂತರಗೊಂಡವರನ್ನ ಕರೆತರಬೇಕು. ಟಿಪ್ಪುವಿನ ಖಡ್ಗದ ಕಾರಣಕ್ಕೆ ಬಹಳ ಮತಾಂತರಗಳಾಗಿವೆ. ಹಾಗಾಗಿ ಟಿಪ್ಪು ಜಯಂತಿಯಂದೇ ನಾವು ಮರುಮತಾಂತರ ಮಾಡಬೇಕು. ಅಸಾಧ್ಯ ಎಂಬುವುದು ಯಾವುದೂ ಇಲ್ಲ. ನಮ್ಮ ಮನೆ ಪಕ್ಕ, ಗ್ರಾಮಗಳಲ್ಲಿ ಘರ್ ವಾಪಸಿ ಮಾಡಬೇಕು. ನಾವು ದೊಡ್ಡದಾಗಿ ಕನಸನ್ನು ಕಾಣಬೇಕು ಎಂದು ತೇಜಸ್ವಿ ಸೂರ್ಯ ತಿಳಿಸಿದ್ದಾರೆ.

ಈ ದೇಶದಲ್ಲಿ ರಾಮಮಂದಿರವನ್ನು ನಿರ್ಮಾಣ ಮಾಡಿದ್ದೇವೆ. ಕಾಶ್ಮೀರದಲ್ಲಿ 370 ಕಾಯ್ದೆಯನ್ನು ತೆಗೆದುಹಾಕಿದ್ದೇವೆ. ಪಾಕ್ ಮುಸಲ್ಮಾನರನ್ನ ಹಿಂದೂಗಳಾಗಿ ಪರಿವರ್ತಿಸಬೇಕು. ಆದ್ಯ ಕರ್ತವ್ಯದ ರೀತಿಯಲ್ಲಿ ಘರ್ ವಾಪಸಿ ಮಾಡಬೇಕು. ಅಖಂಡ ಭಾರತದ ಕಲ್ಪನೆಯಲ್ಲಿ ಪಾಕಿಸ್ತಾನವು ಇದೆ. ಮಠ ದೇವಸ್ಥಾನ ಇದರ ಮುಂದಾಳತ್ವ ವಹಿಸಬೇಕು ಎಂದರು.

Comments are closed.