ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಇದರ ಆಶ್ರಯದಲ್ಲಿ ಜಿಲ್ಲಾ ಪತ್ರಕರ್ತರ ಸಮ್ಮೇಳನ ಸಾಧನೆ ಸಂಭ್ರಮ-2021 28 ಡಿಸೆಂಬರ್ 2021ಮಂಗಳವಾರ, ಬೆಳಗ್ಗೆ 10ರಿಂದ ಸಂಜೆ 4:30ರ ತನಕ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ.
ಪೂರ್ವಾಹ್ನ 10:00 ಗಂಟೆಗೆ ಸಮ್ಮೇಳನದ ಉದ್ಘಾಟನೆಯನ್ನು ಕರ್ನಾಟಕದ ಗೃಹ ಸಚಿವರಾದ ಆರಗ ಜ್ಞಾನೇಂದ್ರ ನೆರವೇರಿಸಲಿರುವರು. ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಅವರನ್ನು ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
ಜಿಲ್ಲಾ ಸಂಘದ ಮೂರು ವರ್ಷಗಳ ಪ್ರಗತಿಯ ವಿವರಗಳನ್ನು ಒಳಗೊಂಡ ವಿಶೇಷ ಸಂಚಿಕೆ ‘ಸಾಧನೆ’ಯನ್ನು ಸಂಸದ ನಳಿನ್ ಕುಮಾರ್ ಕಟೀಲ್ ಅನಾವರಣಗೊಳಿಸುವರು.
ಸಮ್ಮೇಳನದ ಮೆರವಣಿಗೆಯ ಉದ್ಘಾಟನೆಯನ್ನು ಶಾಸಕರುಗಳಾದ ಡಿ.ವೇದವ್ಯಾಸ ಕಾಮತ್ ಮತ್ತು ಡಾ.ವೈ.ಭರತ್ ಶೆಟ್ಟಿ ನೆರವೇರಿಸಲಿರುವರು. ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಲಿದ್ದಾರೆ.
ಮನೋಹರ ಪ್ರಸಾದರ ಕೃತಿ ಭಾವಚಿತ್ರ ಯಾನವನ್ನು ಕರಾವಳಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಗಣೇಶ್ ರಾವ್ ಬಿಡುಗಡೆಗೊಳಿಸುವರು.
ಪತ್ರಿಕಾ ಛಾಯಾಚಿತ್ರ ಪ್ರದರ್ಶನ ಉದ್ಘಾಟನೆಯನ್ನು ಮಂಗಳೂರು ಶಾಸಕ ಯು.ಟಿ.ಖಾದರ್ ಬಿಡುಗಡೆಗೊಳಿಸುವರು.
ಮುಖ್ಯ ಅತಿಥಿಗಳಾಗಿ ಸದಾಶಿವ ಶೆಣೈ, ಅಧ್ಯಕ್ಷರು,ಕರ್ನಾಟಕ ಮಾಧ್ಯಮ ಅಕಾಡೆಮಿ, ಬೆಂಗಳೂರು, ಶಿವಾನಂದ ತಗಡೂರು, ಅಧ್ಯಕ್ಷರು,ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ರಿ),ಬೆಂಗಳೂರು, ಬಿ.ವಿ.ಮಲ್ಲಿಕಾರ್ಜುನ ಯ್ಯ, ಅಧ್ಯಕ್ಷರು,ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟ(IFWJ), ಹೊಸದಿಲ್ಲಿ, ಹೆಚ್.ಬಿ.ಮದನ ಗೌಡ, ಸಂಚಾಲಕರು,ಏಶ್ಯನ್ ಪತ್ರಕರ್ತರ ಒಕ್ಕೂಟ, ರೋನ್ಸ್ ಬಂಟ್ವಾಳ, ಅಧ್ಯಕ್ಷರು,ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘ(ರಿ), ಪುಷ್ಪರಾಜ್ ಜೈನ್ ಅಧ್ಯಕ್ಷರು ಕ್ರೆಡೈ ಮಂಗಳೂರು ಮುಂತಾದವರು ಭಾಗವಹಿಸಲಿರುವರು.
ಮಧ್ಯಾಹ್ನ 1 ಗಂಟೆಯಿಂದ 2 ಗಂಟೆ ವರೆಗೆ ರಾಜೇಶ್ ಮಳಿ ದಂಪತಿಗಳಿಂದ ಮ್ಯಾಜಿಕ್ ಶೋ ಸೇರಿದಂತೆ ವಿವಿಧ ಸಾಂಸ್ಕ್ರತಿಕ ನಡೆಯಲಿದೆ .
ಸಂಜೆ ಸಮಾರೋಪ : ಹಿರಿಯ ಪತ್ರಕರ್ತರಿಗೆ ಸನ್ಮಾನ
ಸಂಜೆ 4:00ರಿಂದ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಹಿರಿಯ ಪತ್ರಕರ್ತರಿಗೆ ಸನ್ಮಾನ ನಡೆಯಲಿದ್ದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಸುನೀಲ್ ಕುಮಾರ್ ಸನ್ಮಾನ ನೆರವೇರಿಸಲಿರುವರು.
ಮುಖ್ಯ ಅತಿಥಿಗಳಾಗಿ ಸಚಿವರಾದ ಕೋಟ ಶ್ರೀ ನಿವಾಸ ಪೂಜಾರಿ,ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ಉನ್ನತ ಅಧಿಕಾರಿಗಳು, ಭಾಗವಹಿಸಲಿದ್ದಾರೆ.
ಮಂಗಳೂರು ವಿವಿ ಉಪಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಸಮಾರೋಪ ಭಾಷಣ ಮಾಡಲಿರುವರು.
ಶಾಸಕರಾದ ಸಂಜೀವ ಮಠ0ದೂರು, ರಾಜೇಶ್ ನಾಯ್ಕ್ ಉಮಾನಾಥ ಕೋಟ್ಯಾನ್ , ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ ಕೆ.ವಿ ರಾಜೇಂದ್ರ ,ಮಂಗಳೂರು ಪೊಲೀಸ್ ಆಯುಕ್ತ ಶಶಿ ಕುಮಾರ್ , ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಸ್ಟ್ಟಾಧಿಕಾರಿ ಸೋನಾವಣೆ ಹೃಷಿಕೇಶ್ ಭಗವಾನ್ ,ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕುಮಾರ ,ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಅದಾನಿ ಯುಪಿಸಿಎಲ್ ಅಧ್ಯಕ್ಷ ಕಿಶೋರ್ ಆಳ್ವ,, ಶ್ರೀ ಕೃಷ್ಣ ಡೈರಿ ಪ್ರೈವೇಟ್ ಲಿಮಿಟೆಡ್ ಅಧ್ಯಕ್ಷ ಪ್ರದೀಪ್ ಪೈ, ಮುಖ್ಯ ಅತಿಥಿ ಗಳಾಗಿ ಭಾಗವಹಿಸಲಿದ್ದಾರೆ.
ಸಮ್ಮೇಳನದಲ್ಲಿ ಪತ್ರಕರ್ತರು, ಜಿಲ್ಲೆಯ ವಿವಿಧ ಕಾಲೇಜುಗಳ ಪತ್ರಿಕೋದ್ಯಮ ವಿಭಾಗದ ಮುಖ್ಯ ಸ್ಥರು,ಉಪನ್ಯಾಸ ಕರು ಮತ್ತು ವಿದ್ಯಾರ್ಥಿ ಗಳು ಸೇರಿದಂತೆ 500ಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ತಿಳಿಸಿದ್ದಾರೆ.