ಉಡುಪಿ: ಬ್ರಹ್ಮಾವರ ತಾಲೂಕಿನ ಕೋಟತಟ್ಟು ಬಾರಿಕೆರೆ ಕೊರಗ ಕಾಲನಿಯ ಸಮುದಾಯದ ವ್ಯಕ್ತಿಯೊಬ್ಬರ ಮನೆಯಲ್ಲಿ ಮೆಹೆಂದಿ ಕಾರ್ಯಕ್ರಮ ನಡೆಯುತ್ತಿದ್ದಾಗ ಕೋಟ ಪೊಲೀಸರು ಭೇಟಿ ನೀಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದ್ದು, ವಿಚಾರಣೆ ಮುಗಿಯುವ ತನಕ ಪಿಎಸ್‌ಐ ಮತ್ತು 5 ಮಂದಿ ಸಿಬ್ಬಂದಿಗಳು ಮುಂದಿನ ಆದೇಶದವರೆಗೆ ಕೋಟ ಠಾಣೆಯಲ್ಲಿ ಕರ್ತವ್ಯಕ್ಕೆ ಹಾಜರಾಗುವಂತಿಲ್ಲ ಎಂದು ಉಡುಪಿ ಎಸ್.ಪಿ ವಿಷ್ಣುವರ್ಧನ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಪೀಕರ್ ಅವಧಿ 10 ಗಂಟೆ ಮೀರಿದ ನಂತರವೂ ನಡೆಯುತ್ತಿದ್ದು, ಸ್ಥಳೀಯರು ಠಾಣೆಗೆ ದೂರು ನೀಡಿದ್ದರು. ಆಗ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶಬ್ದ ಕಡಿಮೆ ಮಾಡುವಂತೆ ಸೂಚನೆ ನೀಡಿದ್ದರು. ಆದರೆ ಮತ್ತೆ ದೂರು ಬಂದ ಹಿನ್ನಲೆಯಲ್ಲಿ ಪಿಎಸ್ಐ ಸ್ಥಳಕ್ಕೆ ಭೇಟಿ ನೀಡಿದ್ದಾರೆ ಎಂದರು.
ಇನ್ನು ಈ ಘಟನೆ ಬಗ್ಗೆ ತನಿಖೆ ನಡೆಸಿ ಖಂಡಿತ ಕ್ರಮ ಕೈಗೊಳ್ಳುತ್ತೆವೆ. ಇಲಾಖೆ ಬಗ್ಗೆ ನಂಬಿಕೆ ಇರಲಿ. ತನಿಖಾ ವರದಿಯನ್ನು ಐಜಿಯವರಿಗೆ ಸಲ್ಲಿಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.
Comments are closed.