ಕರ್ನಾಟಕ

ಸಿಎಂ‌‌ ಮಾತುಕತೆ ಸಕ್ಸಸ್: ನಾಳೆ ಕರೆ ನೀಡಿದ್ದ ಕರ್ನಾಟಕ ಬಂದ್ ವಾಪಾಸ್..!

Pinterest LinkedIn Tumblr

ಬೆಂಗಳೂರು: ಮಹಾರಾಷ್ಟ್ರ ಏಕೀಕರಣ ಸಮಿತಿ ನಿಷೇಧಿಸಿವಂತೆ ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳು ನಾಳೆ ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ವಾಪಸ್ ಪಡೆದಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರೊಂದಿಗೆ ನಡೆಸಿದ ಮಾತುಕತೆ ಫಲಪ್ರದವಾಗಿದ್ದು, ನಾಳಿನ ಬಂದ್ ಕೈಬಿಡುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಸ್ಪಂದಿಸಿರುವ ಮುಖಂಡರು ನಾಳಿನ ಬಂದ್ ಆಚರಣೆಯನ್ನು ಹಿಂಪಡೆದಿದ್ದು, ಮತ್ತೊಂದು ದಿನಾಂಕ ನಿಗದಿಪಡಿಸಿದ್ದಾರೆ.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಾಳಿನ ಬಂದ್ ವಾಪಸ್ ಪಡೆಯಲು ವಾಟಾಳ್ ನಾಗರಾಜ್ ಮತ್ತು ಸಾ. ರಾ. ಗೋವಿಂದ್ ಸ್ಪಂದಿಸಿದ್ದು, ಅವರಿಗೆ ಧನ್ಯವಾದಗಳು ಎಂದರು.

ವಾಟಾಳ್ ನಾಗರಾಜ್ ಮಾತನಾಡಿ, ಸಿಎಂ ಮನವಿ ಮೇರೆಗೆ ನಾವೆಲ್ಲಾ ಒಂದು ತೀರ್ಮಾನಕ್ಕೆ ಬಂದಿದ್ದೇವೆ. ಹೊಸ ವರ್ಷಕ್ಕೆ ತೊಂದರೆಯಾಗಲಿದೆ. ಅದು ಸರಿಯಿಲ್ಲ ಎಂಬುದಾಗಿ ನಿರ್ಧಾರ ತೆಗೆದುಕೊಂಡಿದ್ದು, ನಾಳಿನ ಬಂದ್ ಮುಂದೂಡಲಾಗಿದೆ ಎಂದು ತಿಳಿಸಿದರು. ಮುಂದಿನ ಬಂದ್ ದಿನಾಂಕ ಕುರಿತು ಇನ್ನೂ ಎರಡು ಮೂರು ದಿನಗಳಲ್ಲಿ ಸಭೆ ಕರೆದು ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

 

Comments are closed.