ಕರ್ನಾಟಕ

ಹೊಸ ವರ್ಷಾಚರಣೆಗೆ ಕೆಲವೇ ಗಂಟೆಗಳು ಬಾಕಿ; ಸಂಜೆ 6 ಗಂಟೆಗೆ ಬೆಂಗಳೂರು ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆ ಬಂದ್..!

Pinterest LinkedIn Tumblr

ಬೆಂಗಳೂರು: ಓಮಿಕ್ರಾನ್ ಹಿನ್ನೆಲೆಯಲ್ಲಿ ಬೆಂಗಳೂರಿನ ಹೃದಯ ಭಾಗ ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆಯಲ್ಲಿ ಹೊಸ ವರ್ಷಾಚರಣೆ ಸಂಭ್ರಮಕ್ಕೆ ಅವಕಾಶವಿಲ್ಲ. ಕಳೆದ ವರ್ಷವೂ ಕೂಡ ಕೊರೊನಾ ಹಿನ್ನೆಲೆ ಎಂ.ಜಿ ರಸ್ತೆ ಹಾಗೂ ಬ್ರಿಗೇಡ್‌ ರಸ್ತೆ ಹಾಗೂ ನಗರದ ಪ್ರಮುಖ ರಸ್ತೆಗಳಲ್ಲಿ ಹೊಸ ವರ್ಷಾಚರಣೆ‌ ಇರಲಿಲ್ಲ. ಈ ವರ್ಷವೂ ಓಮಿಕ್ರಾನ್ ಹಿನ್ನೆಲೆ ಸಾಮೂಹಿಕವಾಗಿ ಹೊಸ ವರ್ಷಾಚರಣೆ ನಡೆಸದಂತೆ ಸರ್ಕಾರ ಆದೇಶಿಸಿದೆ.

ಸರ್ಕಾರದ ಸೂಚನೆ ಮೇರೆಗೆ ನೈಟ್‌ ಕರ್ಫ್ಯೂ ಜಾರಿಗೊಳಿಸಿದ್ದು, ರಾತ್ರಿ 10 ಗಂಟೆಯಿಂದ ಬೆಳಗ್ಗೆ ಐದು ಗಂಟೆವರೆಗೆ ಯಾವುದೇ ವ್ಯಾಪಾರ-ವಹಿವಾಟು ನಡೆಯುವಂತಿಲ್ಲ. ಈ ಮಧ್ಯೆ ಶುಕ್ರವಾರ ಸಂಜೆ ಆರು ಗಂಟೆಯಿಂದ ಜ.1ರ ಮುಂಜಾನೆ 6 ಗಂಟೆವರೆಗೆ ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆ ಹಾಗೂ ಸಮೀಪದ ರಸ್ತೆಗಳಲ್ಲಿ ನಗರದ ಸಾರ್ವಜನಿಕ ಸ್ಥಳಗಳಲ್ಲಿ ಜನ ಗುಂಪುಗೂಡುವುದನ್ನು ನಿಷೇಧಿಸಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಮಾರ್ಗಸೂಚಿ ಅನ್ವಯ ರಾತ್ರಿ 10 ಗಂಟೆಯಿಂದ ಮುಂಜಾನೆ 5 ಗಂಟೆವರೆಗೆ ಕರ್ಫ್ಯೂ ಜಾರಿ ಇರಲಿದೆ. ಆದರೆ, ಡಿ.31ರ ಸಂಜೆ 6 ಗಂಟೆಯಿಂದ ಮುಂಜಾನೆ 6 ಗಂಟೆವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಜನ ಗುಂಪು ಗೂಡುವುದನ್ನು ನಿಷೇಧಿಸಲಾಗಿದೆ.

ಶುಕ್ರವಾರ ರಾತ್ರಿ 10 ಗಂಟೆವರೆಗೆ ಹೋಟೆಲ್‌, ಪಬ್‌, ಕ್ಲಬ್‌, ರೆಸ್ಟೋರೆಂಟ್‌ ಸೇರಿದಂತೆ ವಾಣಿಜ್ಯ ಚಟುವಟಿಕೆ ನಡೆ ಸಲು ಅವಕಾಶವಿದೆ. ಬಳಿಕ ರಾತ್ರಿ 10ರ ಬಳಿಕ ಕರ್ಫ್ಯೂ ಜಾರಿಯಾಗಿರುವುದರಿಂದ ಈ ಎಲ್ಲ ಚಟುವಟಿಕೆಗಳು ಬಂದ್‌ ಆಗಲಿವೆ ಎಂದು ಟ್ವಿಟರ್‌ನಲ್ಲಿ ಅವರು ತಿಳಿಸಿದ್ದಾರೆ.

Comments are closed.