ಕರಾವಳಿ

ಉಡುಪಿ: ಕಾಲೇಜಿಗೆ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ತರಗತಿಗೆ ಪ್ರವೇಶ ನಿರಾಕರಣೆ- ಆಕ್ರೋಷ

Pinterest LinkedIn Tumblr

ಉಡುಪಿ: ಹಿಜಾಬ್ ಧರಿಸಿದ ಕಾರಣಕ್ಕಾಗಿ ವಿದ್ಯಾರ್ಥಿನಿಯರಿಗೆ ತರಗತಿ ಪ್ರವೇಶ ನಿರಾಕರಿಸಿ ಹೊರಗಡೆ ನಿಲ್ಲಿಸಿದ ಘಟನೆ ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವರದಿಯಾಗಿದೆ.

ಪ್ರಥಮ ಮತ್ತು ದ್ವಿತೀಯ ಪಿಯು ಆರು ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಕಳೆದ ಮೂರು ದಿನಗಳಿಂದ ಕಾಲೇಜಿಗೆ ಬರುತ್ತಿದ್ದು, ಈ ಕಾರಣಕ್ಕೆ ಪ್ರಾಂಶುಪಾಲರು ವಿದ್ಯಾರ್ಥಿನಿಯರ ತರಗತಿ ಪ್ರವೇಶ ನಿರಾಕರಿಸಿದ್ದಾರೆ ಎಂದು ಆರೋಪಿಸಲಾಗಿದೆ.

ವಿದ್ಯಾರ್ಥಿನಿಯರು ತಮ್ಮ ಧಾರ್ಮಿಕ ಹಕ್ಕನ್ನು ಗೌರವಿಸಿ ಹಿಜಾಬ್‌ನೊಂದಿಗೆ ತರಗತಿಗಳಿಗೆ ಪ್ರವೇಶಿಸಲು ಅವಕಾಶ ಕಲ್ಪಿಸುವಂತೆ ಪ್ರಾಂಶುಪಾಲರನ್ನು ಒತ್ತಾಯಿಸುತ್ತಿದ್ದಾರೆ.

ವಿದ್ಯಾರ್ಥಿನಿಯರು ಕಾಲೇಜಿನ ನಿಯಮಾನುಸಾರ ಹಿಜಾಬ್ ಧರಿಸದೇ ಕಾಲೇಜಿಗೆ ಬಂದರೆ ಮಾತ್ರ ಅವಕಾಶ ನೀಡಲಾಗುವುದು ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.ಘಟನೆಯನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಖಂಡಿಸಿದೆ.

ಕಾಲೇಜು ಪ್ರಾಂಶುಪಾಲ ರುದ್ರೇಗೌಡ ಈ ಕುರಿತು ಸ್ಪಷ್ಟನೆ ನೀಡಿ, ‘ಇಲ್ಲಿಯವರೆಗೆ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿಗಳು ಹಿಜಾಬ್ ಧರಿಸುವ ನಿಯಮ ಇರಲಿಲ್ಲ. ಆದರೆ, ಕಳೆದ ಮೂರು ದಿನಗಳಿಂದ ಒಟ್ಟು 60 ಮುಸ್ಲಿಂ ವಿದ್ಯಾರ್ಥಿನಿಯರಲ್ಲಿ ಆರು ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸುತ್ತಿದ್ದಾರೆ. ಹಾಗಾಗಿ ತರಗತಿಗಳಿಗೆ ಹಾಜರಾಗಲು ಅವಕಾಶ ನೀಡಿಲ್ಲ. ಅವರು ಹಿಜಾಬ್ ಅನ್ನು ತೆಗೆದುಹಾಕಿದರೆ ತರಗತಿಗಳಿಗೆ ಹಾಜರಾಗಬಹುದು. ಅವರ ಕುಟುಂಬ ಸದಸ್ಯರನ್ನು ಕರೆಸಿ ಸಮಸ್ಯೆ ಕುರಿತು ಚರ್ಚಿಸಿದ್ದೇವೆ. ಅವರು ಅರ್ಥಮಾಡಿಕೊಂಡು ನಿಯಮವನ್ನು ಒಪ್ಪಿಕೊಂಡಿದ್ದಾರೆ’.

Comments are closed.