ಕರಾವಳಿ

ಹೃದಯಾಘಾತದಿಂದ ಸಾವನ್ನಪ್ಪಿದ ಮೂಡುಬಿದಿರೆ ಠಾಣೆ ಹೆಡ್ ಕಾನ್ಸ್‌ಟೇಬಲ್

Pinterest LinkedIn Tumblr

ಮಂಗಳೂರು: ಪೊಲೀಸ್ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ.

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂತೋಷ್ (35) ಹೃದಯಾಘಾತದಿಂದ ಮೃತಪಟ್ಟವರು.

ತೀರ್ಥಹಳ್ಳಿಗೆ ತೆರಳಿದ್ದಾಗ ಮಂಗಳವಾರ ರಾತ್ರಿ ಹೃದಯಾಘಾತವಾಗಿದ್ದು ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತು. ಅಷ್ಟರಲ್ಲಿ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ‘ಪೊಲೀಸ್ ಕುಟುಂಬದ ಕಿರಿಯ ಸದಸ್ಯರೊಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ್‌ಟೇಬಲ್ ಸಂತೋಷ್ ಅವರು ಕೊನೆಯುಸಿರೆಳೆದಿದ್ದು, ಅವರ ಆತ್ಮಕೆ ಶಾಂತಿ ಸಿಗಲಿ’ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

Comments are closed.