ಮಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕರ್ತವ್ಯಲೋಪ ಎಸಗಿದ ಮಹಿಳಾ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸೇರಿದಂತೆ ನಗರದ ಆರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಬುಧವಾರ ವಿಡಿಯೋ ವೈರಲ್ ಆಗುತ್ತಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಕುರಿತು ನಗರ ಪೊಲೀಸ್ ಆಯುಕ್ತರು ಪ್ರತಿಕ್ರಿಯಿಸಿದ್ದಾರೆ.
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪೋಕ್ಸೋ ಪ್ರಕರಣದ ತನಿಖೆಯಲ್ಲಿ ನಿರ್ಲಕ್ಷ್ಯ ತೋರಿದ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯ ಪಿಎಸ್‌ಐ ರೋಸಮ್ಮ ಅವರನ್ನು ಅಮಾನತುಗೊಳಿಸಲಾಗಿದೆ. ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಈ ಪ್ರಕರಣದ ಆರೋಪಿಯಾಗಿದ್ದು ನಂತರ ಆತನನ್ನು ಬಂಧಿಸಲಾಗಿದೆ.
ಮತ್ತೊಂದು ಘಟನೆಯಲ್ಲಿ ಠಾಣೆಯಲ್ಲಿಯೇ ಮದ್ಯ ಸೇವಿಸಿದ ಇಬ್ಬರು ಎಎಸ್‌ಐಗಳು, ಇಬ್ಬರು ಹೆಡ್ ಕಾನ್‌ಸ್ಟೆಬಲ್‌ಗಳು ಮತ್ತು ಒಬ್ಬ ಕಾನ್‌ಸ್ಟೆಬಲ್ ಅವರನ್ನು ಅಮಾನತುಗೊಳಿಸಲಾಗಿದೆ. ಈ ಪ್ರಕರಣದ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಿದ್ದರು ಎಂದು ಆಯುಕ್ತರು ತಿಳಿಸಿದ್ದಾರೆ. ಈ ಘಟನೆ ಆಗಸ್ಟ್ 26, 2021 ರಂದು ಸಂಭವಿಸಿದ್ದು ಪೊಲೀಸ್ ಠಾಣೆಯಲ್ಲೇ ಮದ್ಯ ಸಹಿತವಾದ ಪಾರ್ಟಿ ನಡೆದಿತ್ತು.
Comments are closed.