ಕರಾವಳಿ

ಕೊರಗಜ್ಜನ ಅವಹೇಳನ ಮಾಡಿದ ಮುಸ್ಲಿಂ ವರ ಹಾಗೂ ಇತರರ ವಿರುದ್ಧ ಕೇಸು ದಾಖಲು

Pinterest LinkedIn Tumblr

ಮಂಗಳೂರು: ವಿವಾಹ ಸಮಾರಂಭದಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಮುಸ್ಲಿಂ ವರ ಹಾಗೂ ವಧುವಿನ ಕುಟುಂಬದ ಸದಸ್ಯರ ವಿರುದ್ಧ ಪ್ರಕರಣ ದಾಖಲಾಗಿದೆ.

ತುಳುನಾಡಿನ ಆರಾಧ್ಯ ದೈವ ಕೊರಗಜ್ಜನ ವೇಷ ಧರಿಸಿದ್ದ ವರನ ವಿರುದ್ಧ ಬಂಟ್ವಾಳ ತಾಲೂಕಿನ ವಿಟ್ಲ ಪಡ್ನೂರು ಗ್ರಾಮದ ನಿವಾಸಿಯೊಬ್ಬರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಘಟನೆ ಹಿನ್ನೆಲೆ…
ಗುರುವಾರ ರಾತ್ರಿ ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಸಾಲೆತ್ತೂರಿನ ಅಝೀಝ್ ಎಂಬುವವರ ನಿವಾಸದಲ್ಲಿ ನಡೆದ ವಿವಾಹ ಸಮಾರಂಭಕ್ಕೆ ಮಂಜೇಶ್ವರ ಸಮೀಪದ ಉಪ್ಪಳ ಮೂಲದ ಬಶಿತ್ ಎಂಬಾತ ಕೊರಗಜ್ಜನ ವೇಷ ಧರಿಸಿ ಸ್ನೇಹಿತರ ಜತೆಗೂಡಿ ಮಾನಹಾನಿಯಾಗುವ ರೀತಿಯಲ್ಲಿ ಡ್ಯಾನ್ಸ್ ಮಾಡಿದ ವಿಡಿಯೋ ಕ್ಲಿಪ್ಪಿಂಗ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಪೊಲೀಸರು ಐಪಿಸಿ ಸೆಕ್ಷನ್ 153 (ಎ) (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 295 (ಧರ್ಮವನ್ನು ಅವಮಾನಿಸುವ ಉದ್ದೇಶದಿಂದ ಪೂಜಾ ಸ್ಥಳವನ್ನು ಅಪವಿತ್ರಗೊಳಿಸುವುದು) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ

Comments are closed.