ಕರಾವಳಿ

ಪ್ರಧಾನಿ ಮೋದಿ ದೀರ್ಘಾಯುಷ್ಯಕ್ಕಾಗಿ ಕುಂದಾಪುರ ಕ್ಷೇತ್ರ ಬಿಜೆಪಿ ಮಹಿಳಾ ಮೋರ್ಚಾದಿಂದ ಮೃತ್ಯುಂಜಯ ಜಪ, ಪ್ರಾರ್ಥನೆ

Pinterest LinkedIn Tumblr

ಕುಂದಾಪುರ: ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ದೀರ್ಘಾಯುಷ್ಯಕ್ಕಾಗಿ ಕುಂದಾಪುರ ಕ್ಷೇತ್ರ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ‌ಕುಂದಾಪುರದ ಕುಂದೇಶ್ವರ ದೇವಸ್ಥಾನದಲ್ಲಿ ಮೃತ್ಯುಂಜಯ ಜಪ ಮತ್ತು ಪೂಜೆ ನೆರವೇರಿಸಿ ಪ್ರಾರ್ಥಿಸಿಕೊಳ್ಳಲಾಯಿತು.

ಪ್ರಧಾನಿ ನರೇಂದ್ರ ಮೋದಿಯವರ ಪಂಜಾಬ್ ಭೇಟಿ ಸಂದರ್ಭದಲ್ಲಿ ನಿಗದಿತ ಭದ್ರತಾ ಸುರಕ್ಷಾ ಕ್ರಮಗಳನ್ನು ಕೈಗೊಳ್ಳದೇ ಕೀಳು ರಾಜಕೀಯ ಪ್ರದರ್ಶಿಸಿರುವ ಪಂಜಾಬಿನ ಕಾಂಗ್ರೆಸ್ ಸರಕಾರದ ನಡೆಯನ್ನು ಕುಂದಾಪುರ ಬಿಜೆಪಿ ಮಂಡಲದ ಮಹಿಳಾ ಮೋರ್ಚಾ ತೀವ್ರವಾಗಿ ಖಂಡಿಸಿದೆ. ಹಾಗೂ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮವನ್ನು ಕೈಗೊಳ್ಳುವಂತೆ ಕೇಂದ್ರ ಸರಕಾರವನ್ನು ಆಗ್ರಹಿಸಿದೆ.

ಈ ಸಂದರ್ಭದಲ್ಲಿ ಕ್ಷೇತ್ರಾಧ್ಯಕ್ಷ ಶಂಕರ ಅಂಕದಕಟ್ಟೆ, ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್ ಶೆಟ್ಟಿ, ಸತೀಶ್ ಪೂಜಾರಿ, ಮಹಿಳಾ ಮೋರ್ಚಾ ಅಧ್ಯಕ್ಷೆ ರೂಪಾ ಪೈ, ಪ್ರಧಾನ ಕಾರ್ಯದರ್ಶಿಗಳಾದ ಸೌರಭಿ ಪೈ, ಅನಿತಾ ಶ್ರೀಧರ್, ಕಾರ್ಯದರ್ಶಿಗಳಾದ ರೋಹಿಣಿ ಪೈ, ಕಾರ್ಯಕಾರಣಿ ಸದಸ್ಯೆ ಜಯಲಕ್ಷ್ಮೀ ಗಾಣಿಗ, ಮಂಡಲ ಉಪಾಧ್ಯಕ್ಷರಾದ ಶ್ರೀಧರ್ ಮೊಗವೀರ, ಮಂಡಲ ಕಾರ್ಯದರ್ಶಿಗಳಾದ ಸುರೇಂದ್ರ ಸಂಗಮ್, ಆಶಾಲತಾ ಪೈ, ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಸುಧೀರ್ ಕೆ.ಎಸ್, ಪುರಸಭೆ ಸದಸ್ಯ ಗಿರೀಶ್ ಜಿಕೆ, ಪುರಸಭೆ ನಾಮ ನಿರ್ದೇಶಿತ ಸದಸ್ಯರಾದ ಪುಷ್ಪ ಶೇಟ್, ರತ್ನಾಕರ ಶೇರಿಗಾರ್, ಕೋಟೇಶ್ವರ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ರಾಗಿಣಿ ದೇವಾಡಿಗ, ಸದಸ್ಯರಾದ ಲೋಕೇಶ್ ಅಂಕದಕಟ್ಟೆ, ನಾಗರಾಜ್ ಕಾಂಚನ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಲತಾ ಸುರೇಶ್, ಗೋಪಾಡಿ ಗ್ರಾಮ ಪಂಚಾಯತ್ ಸದಸ್ಯೆ ನೇತ್ರಾವತಿ, ಹಿಂದುಳಿದ ವರ್ಗಗಳ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜೀವನ್ ಅಂಕದಕಟ್ಟೆ, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಸುನೀಲ್ ಖಾರ್ವಿ, ಉಪಾಧ್ಯಕ್ಷ ಅಭಿಷೇಕ ಅಂಕದಕಟ್ಟೆ, ಪಕ್ಷದ ಪ್ರಮುಖರಾದ ಸತೀಶ್ ಶೆಟ್ಟಿ, ಬಾಬು ಪೈ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Comments are closed.