ಕರಾವಳಿ

ಸಿಗಂಧೂರಿನಿಂದ ಕೊಲ್ಲೂರಿಗೆ ಯಾತ್ರಾರ್ಥಿಗಳನ್ನು ಕರೆತರುತ್ತಿದ್ದ ಬಸ್‌ ಪಲ್ಟಿಯಾಗಿ ಹಲವರಿಗೆ ಗಾಯ

Pinterest LinkedIn Tumblr

ಕುಂದಾಪುರ: ಸಿಗಂಧೂರಿನಿಂದ ಕೊಲ್ಲೂರಿಗೆ ನಲವತ್ತಕ್ಕೂ ಅಧಿಕ ಯಾತ್ರಾರ್ಥಿಗಳನ್ನು ಹೊತ್ತು ಸಾಗುತ್ತಿದ್ದ ಖಾಸಗಿ ಬಸ್ಸೊಂದು ಕೊಲ್ಲೂರು ಬಳಿಯಲ್ಲಿನ ದಳಿ ತಿರುವಿನ ಬಳಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದು, ಹಲವರು ಗಾಯಗೊಂಡ ಘಟನೆ ಜ.11ರ ಸಂಜೆ ನಡೆದಿದೆ.

ಅಪಘಾತದಿಂದಾಗಿ 22 ಮಂದಿ ಪ್ರಯಾಣಿಕರು ಗಾಯಗೊಂಡರು. ಅವರನ್ನು ಕುಂದಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. 22 ಮಂದಿಯ ಪೈಕಿ ಶಂಕರಪ್ಪ (50), ರೂಪಾ (35), ಶ್ಯಾಮಲಮ್ಮ (42), ರತ್ನಮ್ಮ (52), ವೆಂಕಟರಮಣ (45), ಚಂದ್ರಕಲಾ (43), ಕಲಾವತಿ ಅವರಿಗೆ ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಮೂವರು ಮಹಿಳೆಯರ ಕೈ ತುಂಡಾಗಿದ್ದು, ಇಬ್ಬರ ತಲೆಗೆ ಗಂಭೀರ ಗಾಯಗಳಾಗಿವೆ. ಇನ್ನೊಬ್ಬರ ಪಕ್ಕೆಲುಬು ಮುರಿದಿದೆ. ಗಾಯಾಳುಗಳು ಕೋಲಾರದ ಮುಳುಬಾಗಿಲು ಮೂಲದವರೆಂದು ತಿಳಿದುಬಂದಿದೆ.

ಕೊಲ್ಲೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Comments are closed.