ಕರ್ನಾಟಕ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿ ಕಾಂಗ್ರೆಸ್‌ನ 40 ಮುಖಂಡರ ವಿರುದ್ಧ ಎಫ್ಐಆರ್

Pinterest LinkedIn Tumblr

ರಾಮನಗರ: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್‌ ನಡೆಸುತ್ತಿರುವ ಪಾದಯಾತ್ರೆ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಕೋವಿಡ್ ನಿಯಮ ಧಿಕ್ಕರಿಸಿ ಪಾದಯಾತ್ರೆ ನಡೆಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಪಕ್ಷದ 40 ಮುಖಂಡರ ವಿರುದ್ಧ ಮತ್ತೊಂದು ಎಫ್‌ಐಆರ್‌ ದಾಖಲಾಗಿದೆ.

(ಪಾದಯಾತ್ರೆ ಚಿತ್ರಗಳು)

ಸೋಮವಾರ ಶಿವಕುಮಾರ್‌ ಅವರ ಹುಟ್ಟೂರಾದ ದೊಡ್ಡಾಲಹಳ್ಳಿಯಿಂದ ಕನಕಪುರದವರೆಗೆ ಸುಮಾರು 15 ಕಿ.ಮೀ ದೂರದ ಪಾದಯಾತ್ರೆ ನಡೆಸಿದ ಕಾಂಗ್ರೆಸ್‌ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಕೋವಿಡ್ ನಿರ್ಬಂಧಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಸಾತನೂರು ಪೊಲೀಸ್‌ ಠಾಣೆಯಲ್ಲಿ ನಿನ್ನೆ ಎಫ್‌ಐಆರ್‌ ದಾಖಲಾಗಿದೆ.

ಶಿವಕುಮಾರ್ ಅವರ ಸಹೋದರ ಮತ್ತು ಬೆಂಗಳೂರು ಗ್ರಾಮಾಂತರ ಸಂಸದ ಡಿ ಕೆ ಸುರೇಶ್, ಮಾಜಿ ಸಚಿವರಾದ ಕೃಷ್ಣ ಬೈರೇಗೌಡ, ಎಚ್ ಆಂಜನೇಯ ಮತ್ತು ಪಕ್ಷದ ಮುಖಂಡರಾದ- ನಾರಾಯಣಸ್ವಾಮಿ, ಮೋಟಮ್ಮ, ಪಿಟಿ ಪರಮೇಶ್ವರ ನಾಯ್ಕ್, ಧ್ರುವನಾರಾಯಣ ಸೇರಿದಂತೆ 40 ನಾಯಕರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ಭಾರೀ ಸಂಖ್ಯೆಯಲ್ಲಿ ಗುಂಪುಗೂಡಿರುವುದು, ಮಾಸ್ಕ್ ಧರಿಸದೇ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ ಮತ್ತು ಇತರೆ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

 

Comments are closed.