ಕರಾವಳಿ

ಕಾಪುವಿನಲ್ಲಿ ಟಯರ್‌ ಸ್ಫೋಟಗೊಂಡು ಅಡಿಕೆ ಸಾಗಾಟದ ಟೆಂಪೋ ಪಲ್ಟಿ

Pinterest LinkedIn Tumblr

ಉಡುಪಿ: ಕಾಪು ರಾಷ್ಟ್ರೀಯ ಹೆದ್ದಾರಿ 66ರ ಫ್ಲೈ ಓವರ್‌‌ನಲ್ಲಿ, ಅಡಿಕೆ ಸಾಗಾಟದ ಟೆಂಪೋವೊಂದು ಟಯರ್‌‌ ಸಿಡಿದು ಉರುಳಿ ಬಿದ್ದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.

ಅಪಘಾತದಲ್ಲಿ ಟೆಂಪೋ ಚಾಲಕ ಹಾಗೂ ನಿರ್ವಾಹಕ ಅದೃಷ್ಟವಶಾತ್ ಪಾರಾಗಿದ್ದು ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

ಸಿದ್ದಾಪುರದಿಂದ ಮಂಗಳೂರಿಗೆ ಅಡಿಕೆ ಸಾಗಾಟ ಮಾಡುತ್ತಿದ್ದ ಟೆಂಪೋದ ಟಯರ್‌‌‌ ಮಾರ್ಗ ಮಧ್ಯೆ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಫ್ಲೈಓವರ್‌‌ನಲ್ಲಿ ಉರುಳಿ ಬಿದ್ದಿದೆ.

ಇದರಿಂದಾಗಿ ಕೆಲ‌ಕಾಲ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Comments are closed.