ಕರ್ನಾಟಕ

ಮೇಕೆದಾಟು ಪಾದಯಾತ್ರೆ; ಕಾಂಗ್ರೆಸ್ ನಾಯಕರ ವಿರುದ್ಧ 3ನೇ ಎಫ್ಐಆರ್; ಡೋಂಟ್ ಕೇರ್ ಎಂದ ಸಿದ್ದರಾಮಯ್ಯ

Pinterest LinkedIn Tumblr

ಬೆಂಗಳೂರು: ರಾಜ್ಯದಲ್ಲಿ ಓಮಿಕ್ರಾನ್ ಕೊರೋನಾ ರೂಪಾಂತರಿ ಪ್ರಕರಣ ಸೇರಿದಂತೆ ಕೋವಿಡ್-19 ಕೇಸುಗಳು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಕೊರೋನಾ ನಿಯಮ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ ಮಾಡುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ 3ನೇ ಕೇಸು ದಾಖಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ಇತರ 63 ಮಂದಿ ಕಾಂಗ್ರೆಸ್ ನಾಯಕರು, ಪಾದಯಾತ್ರೆಯಲ್ಲಿ ಭಾಗವಹಿಸಿದವರ ವಿರುದ್ಧ ರಾಮನಗರದಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಕನಕಪುರ ಠಾಣೆಯಲ್ಲಿ ಮೂರನೇ ಎಫ್ಐಆರ್ ದಾಖಲಾಗಿದೆ.

ನಾನು ಸೇರಿದಂತೆ ಪಕ್ಷದ 30 ಜನರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಇಂತಹ ಕೇಸ್‌ಗಳಿಗೆಲ್ಲ ನಾವು ಹೆದರುವುದಿಲ್ಲ. ಕೊರೊನ ನಿಯಮ ಉಲ್ಲಂಘಿಸಿದ ಮುಖ್ಯಮಂತ್ರಿಗಳು ಸೇರಿ ಬಿಜೆಪಿಯವರ ಮೇಲೂ ಏಕೆ ಪ್ರಕರಣ ದಾಖಲಿಸಿಲ್ಲ? ಇದರಿಂದ ಸರ್ಕಾರದ ದುರುದ್ದೇಶ ಸ್ಪಷ್ಟವಾಗುತ್ತದೆ. ಅದರೆ ನಮ್ಮ ಪಾದಯಾತ್ರೆ ತಡೆಯಲು ಅವರಿಂದ ಸಾಧ್ಯವಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ.

 

 

 

Comments are closed.