ಕರ್ನಾಟಕ

ಸ್ಕೂಟಿಗೆ ಟಿಪ್ಪರ್ ಡಿಕ್ಕಿ, ನನ್ನಮ್ಮ ಸೂಪರ್ ಸ್ಟಾರ್ ಖ್ಯಾತಿಯ ಸಮನ್ವಿ ಸಾವು; ಮುಗಿಲು ಮುಟ್ಟಿದ ಆಕ್ರಂಧನ

Pinterest LinkedIn Tumblr

ಬೆಂಗಳೂರು: ಬೆಂಗಳೂರಿನ ಕೋಣನಕುಂಟೆ ಬಳಿ ಗುರುವಾರ ಸ್ಕೂಟಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರವಾಗುತ್ತಿದ್ದ ನನ್ನಮ್ಮ ಸೂಪರ್ ಸ್ಟಾರ್ ಶೋ ಸ್ಪರ್ಧಿ ಸಮನ್ವಿ ಎಂಬ ಆರು ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದು, ಆಕೆಯ ತಾಯಿ ನಟಿ ಅಮೃತಾ ನಾಯ್ಡು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಮರಣೋತ್ತರ ಪರೀಕ್ಷೆ ನಡೆದಿದ್ದು ಆಸ್ಪತ್ರೆಯ ಎದುರು ಪೋಷಕರ ಆಕ್ರಂಧನ ಮುಗಿಕುಮುಟ್ಟಿದೆ.

ಸಮನ್ವಿ, ತಾಯಿ ಅಮೃತ ನಾಯ್ಡು ಜೊತೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಕೋಣನ ಕುಂಟೆ ರಸ್ತೆಯಿಂದ ವಾಜರಹಳ್ಳಿ ಕಡೆ ತೆರಳುತ್ತಿದ್ದಾಗ ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಮೃತ ಸಮನ್ವಿ ಹರಿಕಥಾ ಗಾಯಕ ಗುರುರಾಜ ನಾಯ್ಡು ಅವರ ಮೊಮ್ಮಗಳು.

ಅಪಘಾತದಲ್ಲಿ ಗಾಯಗೊಂಡಿರುವ ಅಮೃತಾ ನಾಯ್ಡು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಟಿಪ್ಪರ್ ಲಾರಿ ಚಾಲಕನನ್ನು ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಈ ಸಂಬಂಧ ಕುಮಾರಸ್ವಾಮಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.