ಕರ್ನಾಟಕ

ಗಾಂಜಾ ದಂಧೆಯಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಸ್ಟಾರ್ ರಾಹುಲ್ ಕಾಲಿಗೆ ಪೊಲೀಸರಿಂದ ಗುಂಡೇಟು..!

Pinterest LinkedIn Tumblr

ಬೆಂಗಳೂರು: ಬೆಳ್ಳಂಬೆಳಗ್ಗೆ ರೌಡಿಶೀಟರ್ ಕಾಲಿಗೆ ಪೊಲೀಸರು ಗುಂಡೇಟು ಹೊಡೆದು ಬಂಧಿಸಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಕೋಣನಕುಂಟೆಯ ನಾರಾಯಣ ನಗರದಲ್ಲಿ ರಾಹುಲ್ ಅಲಿಯಾಸ್ ಸ್ಟಾರ್ ರಾಹುಲ್ ಕಾಲಿಗೆ ಪೊಲೀಸರು ಗುಂಡೇಟು ಹೊಡೆದು ಬಂಧಿಸಿದ್ದಾರೆ.

ಗಾಂಜಾ ದಂಧೆಯಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ರಾಹುಲ್ ಬಂಧಿಸಲು ಇಂದು ಬೆಳಗಿನ ಜಾವ 4:30ರ ಸುಮಾರಿಗೆ ಪೊಲೀಸರು ತೆರಳಿದ್ದರು. ಈ ವೇಳೆ ಸಬ್ ಇನ್ಸ್ ಪೆಕ್ಟರ್ ಮೇಲೆ ಡ್ಯಾಗರ್‌ನಿಂದ ಹಲ್ಲೆಗೆ ಯತ್ನಿಸಿ ಪರಾರಿಯಾಗಲು ರೌಡಿಶೀಟರ್ ರಾಹುಲ್ ಯತ್ನಿಸಿದ್ದಾನೆ. ಆಗ ಆತ್ಮರಕ್ಷಣೆಗಾಗಿ ಹನುಮಂತನಗರ ಠಾಣೆಯ ಸಬ್ ಇನ್ಸ್ ಪೆಕ್ಟರ್ ಬಸವರಾಜ್ ಪಾಟೀಲ್ ಆರೋಪಿ ಕಾಲಿಗೆ ಫೈರಿಂಗ್ ಮಾಡಿದ್ದಾರೆ.

ರೌಡಿ ಶೀಟರ್ ಕುಳ್ಳು ರಿಜ್ವಾನ್ ಸಹಚರನಾಗಿರುವ ಸ್ಟಾರ್ ರಾಹುಲ್, ಪೊಲೀಸರಿಗೆ 19 ಕೇಸಿನಲ್ಕಿ ಬೇಕಾಗಿದ್ದ ಆರೋಪಿ. ನಗರದ ದಕ್ಷಿಣ ವಿಭಾಗದ ಹಲವು ಠಾಣೆಗಳಲ್ಲಿ ಈತನ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು. ಈತನ ವಿರುದ್ಧ ವಾರೆಂಟ್ ಸಹ ಜಾರಿ ಆಗಿತ್ತು. ಈ ಹಿನ್ನಲೆ ಈತನ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಇಂದು ಬೆಳಿಗ್ಗೆ ಕೊಣನಕುಂಟೆ ಬಳಿ ಇರುವ ಬಗ್ಗೆ ಖಚಿತ ಮಾಹಿತಿ ಸಿಕ್ಕಿದೆ. ಈ ಮಾಹಿತಿ ಆಧರಿಸಿ ಸಬ್ ಇನ್ಸ್ ಪೆಕ್ಟರ್ ಮತ್ತು ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದರು. ಈ ವೇಳೆ ಪೊಲೀಸ್ ಸಿಬ್ಬಂದಿ ನಿಂಗಪ್ಪ ಮೇಲೆ ಹಲ್ಲೆ ಮಾಡಿ ಎಸ್ಕೆಪ್ ಆಗಲು ಯತ್ನಿಸಿದ್ದಾನೆ. ಆಗ ತಡೆಯಲು ಹೋದ ಸಬ್ ಇನ್ಸ್ ಪೆಕ್ಟರ್ ಬಸವರಾಜ್ ಪಾಟೀಲ್ ಮೇಲೆ ಕೂಡ ಹಲ್ಲೆಗೆ ಯತ್ನಿಸಿದ್ದು ಆತ್ಮರಕ್ಷಣೆಗೆಂದು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಇತ್ತೀಚೆಗೆ ಪತ್ತೆಯಾದ 200 ಕೆಜಿ ಗಾಂಜಾ ಕೇಸ್ನಲ್ಲಿ ಸಹ ಇತನ ಹೆಸರು ಕೇಳಿ ಬಂದಿತ್ತು.

 

Comments are closed.