ಬೆಂಗಳೂರು: ಪೆಡ್ಲರ್’ಗಳಿಂದ ಗಾಂಜಾ ತರಿಸಿ ಮಾರಾಟ ಮಾಡುತ್ತಿದ್ದ ಇಬ್ಬರು ಪೊಲೀಸರನ್ನು ಬಂಧಿಸಲಾಗಿದೆ. ಶಿವಕುಮಾರ್ ಹಾಗೂ ಸಂತೋಷ್ ಎಂಬ ಕಾನ್ಸ್‌ಟೇಬಲ್ ಗಳು ಗಾಂಜಾ ಮಾರಾಟ ಮಾಡಿ ಸಿಕ್ಕಿಬಿದ್ದಿದ್ದಾರೆ. ಇವರು, ಗಾಂಜಾ ಪೆಡ್ಲರ್‌ಗಳ ಮೂಲಕ ಗಾಂಜಾ ತರಿಸಿಕೊಂಡು ಮಾರಾಟಕ್ಕೆ ಮಾಡುತ್ತಿದ್ದರು.
ಇವರಿಬ್ಬರು ಖತರ್ನಾಕ್ ಪೊಲೀಸರು ಸಿಎಂ ಬಸವರಾಜ ಬೊಮ್ಮಾಯಿ ಮನೆಯ ಭದ್ರತೆಗೆ ನಿಯೋಜನೆಗೊಂಡಿದ್ದು ಕೊರಮಂಗಲ ಪೊಲೀಸ್ ಠಾಣಾ ಸಿಬ್ಬಂದಿಯಾಗಿದ್ದಾರೆ. ಮೋಸ್ಟ್ ವಾಂಟೆಡ್ ಪೆಡ್ಲರ್‌ಗಳಾದ ಅಖಿಲ್ ರಾಜ್ ಹಾಗೂ ಅಮ್ಜದ್ ಖಾನ್ ಬಳಿ ಗಾಂಜಾ ಖರೀದಿಸಿ ಮಾರಾಟ ಮಾಡುತ್ತಿದ್ದರು.
ಪೆಡ್ಲರ್‌ಗಳಿಂದ ಗಾಂಜಾ ಪಡೆದು ಹಣ ಕೊಡದೇ ಹಲ್ಲೆಗೆ ಮುಂದಾಗಿದ್ದರು. ಮುಖ್ಯಮಂತ್ರಿಗಳ ಮನೆ ಇರುವ ಆರ್.ಟಿ. ನಗರದ 80ಅಡಿ ರಸ್ತೆ ಬಳಿ ಡೀಲ್ ಮಾಡುತ್ತಿದ್ದರು. ಸಿಎಂ ಮನೆ ಬಳಿ ಗಸ್ತಿನಲ್ಲಿದ್ದ ಹೊಯ್ಸಳ ಸಿಬ್ಬಂದಿಗೆ ಈ ಬಗ್ಗೆ ಅನುಮಾನ ಬಂದು ವಿಚಾರಣೆ ನಡೆಸಿದ್ದು ಈ ವೇಳೆ ಪೊಲೀಸರೆ ಗಾಂಜಾ ಮಾರಾಟಕ್ಕಿಳಿದಿರುವುದನ್ನು ತಿಳಿದು ಬಂದಿದೆ.
ಪೊಲೀಸರು ಹಾಗೂ ಗಾಂಜಾ ಪೆಡ್ಲರ್‌ಗಳನ್ನು ಬಂಧಿಸಿರುವ ಆರ್.ಟಿ.ನಗರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Comments are closed.