ಕರ್ನಾಟಕ

ಟಿಕ್ ಟಾಕ್ ಸ್ಟಾರ್ ಸೋನು ಶ್ರೀನಿವಾಸ್ ಗೌಡಗೆ ನಕಲಿ ಸಿಡಿ, ವಿಡಿಯೋ ಮೂಲಕ ಬೆದರಿಕೆ; ಕಮಿಷನರ್’ಗೆ ದೂರು

Pinterest LinkedIn Tumblr

ಬೆಂಗಳೂರು: ಟಿಕ್ ಟಾಕ್ ಸ್ಟಾರ್ ಸೋನು ಶ್ರೀನಿವಾಸ್ ಗೌಡಗೆ ಕೆಲವು ದುಷ್ಕರ್ಮಿಗಳು ಸಾಮಾಜಿಕ ಜಾಲತಾಣದಲ್ಲಿ ಬ್ಲಾಕ್ ಮೇಲ್ ಮಾಡುತ್ತಿದ್ದು, ಅವರ ವಿರುದ್ಧ ಸೋನು ಶ್ರೀನಿವಾಸ್ ಗೌಡ ಪೊಲೀಸರಿಗೆ ದೂರು ನೀಡಿದ್ದಾರೆ.

ಕೆಲವರು ನಕಲಿ ಸಿಡಿ ಮತ್ತು ವಿಡಿಯೋಗಳನ್ನು ಇಟ್ಟುಕೊಂಡು ನನಗೆ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಇದರಿಂದ ನನಗೆ ಮಾನಸಿಕವಾಗಿ ಹಿಂಸೆಯಾಗುತ್ತಿದೆ. ಇವರ ವಿರುದ್ಧ ಕ್ರಮ ತೆಗೆದುಕೊಂಡು ನ್ಯಾಯ ಒದಗಿಸಿಕೊಡಿ ಎಂದು ಸೋನು ಶ್ರೀನಿವಾಸ್ ಗೌಡ ಬೆಂಗಳೂರು ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Comments are closed.