ಕರಾವಳಿ

ಹುಲಿಕಲ್ ಘಾಟ್’ನಲ್ಲಿ ಶಾರ್ಟ್ ಸರ್ಕ್ಯೂಟ್’ನಿಂದ ಸುಟ್ಟು ಕರಕಲಾದ ಕಾರು…!

Pinterest LinkedIn Tumblr

ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕಿನ ಶಂಕರನಾರಾಯಣದಿಂದ ಹೊನ್ನಾಳಿಗೆ ತೆರಳುತ್ತಿದ್ದ ಕಾರೊಂದು ಹುಲಿಕಲ್ ಘಾಟ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ.

ಕಾರಿನಲ್ಲಿ ಚಾಲಕ ಸೇರಿದಂತೆ ಐದು ಮಂದಿ ಪ್ರಯಾಣಿಕರಿದ್ದು ಎಲ್ಲರೂ ಸುರಕ್ಷಿತವಾಗಿದ್ದಾರೆ. ವಿಷಯ ತಿಳಿದು ಕೂಡಲೇ ಹೊಸನಗರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದರಾದರೂ ಅಷ್ಟರಲ್ಲಾಗಲೇ ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿತ್ತು.

ಈ ಘಟನೆ ಉಡುಪಿ ಜಿಲ್ಲೆಯ ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Comments are closed.