ಕರ್ನಾಟಕ

ನಟಿ ದಿವ್ಯಾ ಸುರೇಶ್ ಅವರಿಗೆ ಅಪಘಾತ; ಅಪಾಯದಿಂದ ಪಾರು

Pinterest LinkedIn Tumblr

ಬೆಂಗಳೂರು: ಕನ್ನಡ ಬಿಗ್​ ಬಾಸ್​ ಸೀಸನ್​ ಮೂಲಕ ಸಾಕಷ್ಟು ಖ್ಯಾತಿ ಗಳಿಸಿಕೊಂಡ ದಿವ್ಯಾ ಸುರೇಶ್​ ಅವರಿಗೆ ರಸ್ತೆ ಅಪಘಾತವಾಗಿದೆ. ಅದೃಷ್ಟವಶಾತ್​ ಯಾವುದೇ ಅಪಾಯ ಸಂಭವಿಸಿಲ್ಲ. ಸಣ್ಣಪುಟ್ಟ ಗಾಯಗಳಾಗಿದೆ. ಈ ಬಗ್ಗೆ ದಿವ್ಯಾ ಮಾಹಿತಿ ಹಂಚಿಕೊಂಡಿದ್ದಾರೆ.

ಸೋಮವಾರ ಅವರು ಬೈಕ್​ನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.  ಅಪಘಾತದಲ್ಲಿ ಸಣ್ಣ ಪುಟ್ಟ ಗಾಯ ಆಗಿದೆ. ಅವರು ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ. ದಿವ್ಯಾ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಕೊರೊನಾ ವ್ಯಾಕ್ಸಿನ್ ಪಡೆದು ಬರುವಾಗ ಅಪಘಾತವಾಗಿದೆ ಎಂದು ತಿಳಿದು ಬಂದಿದೆ.

ಮುಖದ ಮೇಲೆ ದಿವ್ಯಾಗೆ ಸಣ್ಣ ಗಾಯ ಆಗಿದೆ. ಪ್ರಾಣಾಪಾಯದಿಂದ ದಿವ್ಯಾ ಸುರೇಶ್ ಪಾರಾಗಿದ್ದಾರೆ. ಇನ್​ಸ್ಟಾಗ್ರಾಮ್​ ಸ್ಟೇಟಸ್​ ಮೂಲಕ ದಿವ್ಯಾ ಈ ಮಾಹಿತಿ ಹಂಚಿಕೊಂಡಿದ್ದಾರೆ. ಅವರು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಕೋರುತ್ತಿದ್ದಾರೆ.

Comments are closed.