ಕರಾವಳಿ

ಬ್ರಹ್ಮಾವರದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು

Pinterest LinkedIn Tumblr

ಉಡುಪಿ: ಬ್ರಹ್ಮಾವರ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಾಗೊಂಡಿದ್ದ ಸರಿತಾ ಪಿಂಟೊ (38) ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.

ಇವರು ಸೋಮವಾರ ಕೋಟದಲ್ಲಿರುವ ತನ್ನ ತಂದೆ-ತಾಯಿ ಮನೆಗೆ ಕಳೆದ ಕೆಲವು ದಿನಗಳ ಹಿಂದೆ ಕುವೈಟ್ ನಿಂದ ಆಗಮಿಸಿದ ಪತಿ ಅನಿಲ್ ಪಿಂಟೊ ಮತ್ತು 3 ವರ್ಷದ ಮಗುವಿನೊಂದಿಗೆ ದ್ವಿಚಕ್ರದಲ್ಲಿ ತೆರಳುತ್ತಿದ್ದ ವೇಳೆ ಬ್ರಹ್ಮಾವರದ ಬಳಿ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದರು.

ಮಗ ಮತ್ತು ಪತಿ ಸಣ್ಣ ಪುಟ್ಟ ಗಾಯಾಗಳೊಂದಿಗೆ ಪಾರಾಗಿದ್ದಾರೆ, ತಲೆಗೆ ತೀವ್ರವಾಗಿ ಗಾಯಗೊಂಡಿದ್ದ ಸರಿತಾರನ್ನು ಮಣಿಪಾಲದ ಕೆಎಂಸಿ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ದಿನ ಜೀವನ್ಮರಣ ಹೋರಾಟ ನಡೆಸಿದ ಅವರು ನಿಧನರಾಗಿದ್ದಾರೆ.

ಮೃತರು ತಾಯಿ,ಪತಿ,ಪುತ್ರ, ಸಹೋದರ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.

Comments are closed.