ಮಂಗಳೂರು: ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿರುವ ಘಟನೆ ಮಂಗಳೂರಿನ ಯೆಯ್ಯಾಡಿ ಜಂಕ್ಷನ್ ಬಳಿ ನಡೆದಿದೆ. ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ.
ಡ್ಯಾನಿ ಪೌಲ್(38) ಹಾಗೂ ಮ್ಯಾಕ್ಸಿಮಾ ನೊರೊನ್ಹಾ(54) ಎಂಬವರುವ ಹಲ್ಲೆ ನಡೆಸಿದ್ದು, ಅವರನ್ನು ಬಂಧಿಸಲಾಗಿದೆ.
ಪೊಲೀಸ್ ಸಿಬ್ಬಂದಿಗಳಿಬ್ಬರು ಜನವರಿ 18 ರಂದು ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಇಬ್ಬರು ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಲಾಗಿದೆ.
ಪೊಲೀಸರ ದ್ವಿಚಕ್ರ ವಾಹನದ ಕೀ ಕಿತ್ತೆಸೆದು, ಅವಾಚ್ಯವಾಗಿ ನಿಂದನೆ ಮಾಡಿ, ಬೆದರಿಕೆಯೊಡ್ಡಿ, ಪೊಲೀಸರಿಗೆ ಹಲ್ಲೆ ನಡೆಸಿದ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.