ಕರ್ನಾಟಕ

ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಮೊಮ್ಮಗಳು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣು

Pinterest LinkedIn Tumblr

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗ್ಗೆ ಸುಮಾರು 10 ಗಂಟೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿ.ಎಸ್.ವೈ ಪುತ್ರಿ ಪದ್ಮಾವತಿಯವರ ಪುತ್ರಿ ಸೌಂದರ್ಯ(30) ಆತ್ಮಹತ್ಯೆ ಮಾಡಿಕೊಂಡವರು.

ಬಿ.ಎಸ್​ ಯಡಿಯೂರಪ್ಪ ಅವರ ಪುತ್ರಿ ಪದ್ಮಾವತಿ ಅವರ ಮಗಳು ಸೌಂದರ್ಯ ಅವರು ವಸಂತನಗರದಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜು ಬಳಿಯ ಫ್ಲ್ಯಾಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌಂದರ್ಯ ಅವರು ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದರು. 2018ರಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಮರಿಸ್ವಾಮಿ ಅಣ್ಣನ ಮಗ ಡಾ. ನೀರಜ್‌ ಅವರನ್ನು ಸೌಂದರ್ಯ ಮದುವೆಯಾಗಿದ್ದು ಒಂದು ಮಗು ಇದೆ.

ಸೌಂದರ್ಯ ಪತಿ ನೀರಜ್ ಬೆಳಗ್ಗೆ 8 ಗಂಟೆಗೆ ಕೆಲಸಕ್ಕೆ ಹೋಗಿದ್ದರು. ಇತ್ತ ಸೌಂದರ್ಯ 10 ಗಂಟೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆ ಕೆಲಸದವರು ಬಂದಾಗ ಬಾಗಿಲು ತೆಗೆಯದಿದ್ದಾಗ ಸೌಂದರ್ಯ ಪತಿ ಡಾ. ನೀರಜ್‌ಗೆ ಕೆಲಸದವರು ಕರೆ ಮಾಡಿದ್ದರು. ಮನೆ ಕೆಲಸದವರು ಫೋನ್ ಮಾಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಬೌರಿಂಗ್ ಆಸ್ಪತ್ರೆಯಲ್ಲಿ ಮೃತದೇಹ ಇರಿಸಲಾಗಿದೆ.

ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Comments are closed.