ಕರ್ನಾಟಕ

ರವಿ ಡಿ. ಚನ್ನಣ್ಣನವರ್ ವರ್ಗಾವಣೆ ತಡೆಹಿಡಿದ ಕರ್ನಾಟಕ ಸರ್ಕಾರ

Pinterest LinkedIn Tumblr

ಬೆಂಗಳೂರು: ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಅವರನ್ನು ಕರ್ನಾಟಕ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ಎಂಡಿಯಾಗಿ ವರ್ಗಾವಣೆ ಮಾಡಿ ಹೊರಡಿಸಲಾಗಿದ್ದ ಆದೇಶವನ್ನು ತಡೆಹಿಡಿಯಲಾಗಿದೆ.

ಜ.27ರಂದು ಒಂಬತ್ತು‌ ಮಂದಿ ಐಪಿಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಲಾಗಿತ್ತು ಇದರಲ್ಲಿ ರವಿ ಡಿ ಚನ್ನಣ್ಣನವರ್ ಸಹ ಇದ್ದರು. ಸಿಐಡಿಯಿಂದ ಕರ್ನಾಟಕ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ಎಂಡಿಯಾಗಿ ವರ್ಗಾವಣೆ ಮಾಡಲಾಗಿತ್ತು.

ಇದೀಗ ಕರ್ನಾಟಕ ಸರ್ಕಾರ ಏಕಾಏಕಿ ರವಿ ಡಿ ಚನ್ನಣ್ಣನವರ್ ಅವರ ವರ್ಗಾವಣೆ ಆದೇಶನ್ನು ತಡೆಯಿಡಿಲಾಗಿದೆ ಎಂದು ಸುತ್ತೋಲೆ ಹೊರಡಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ರವಿ ರವಿ ಡಿ ಚನ್ನಣ್ಣನವರ್ ವರ್ಗಾವಣೆಗೆ ಸರ್ಕಾರ ಬ್ರೇಕ್ ಹಾಕಿದೆ.

ಪೊಲೀಸ್ ಇಲಾಖೆಯಿಂದ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮಕ್ಕೆ ವರ್ಗಾವಣೆ ಮಾಡಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಒಂದು ನಿಗಮದ ಎಂಡಿಯಾಗಿ ವರ್ಗಾವಣೆ ಮಾಡಿದ್ದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳು ನಡೆದಿವೆ..

ಐಪಿಎಸ್‌ ಅಧಿಕಾರಿ ರವಿ ಡಿ ಚನ್ನಣ್ಣವರ್ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪಗಳು ಸದ್ಯ ಕೇಳಿಬರುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ಇವರ ವಿಚಾರವಾಗಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಈ ನಡುವೆ ತಮ್ಮ ವಿರುದ್ಧ ಸುದ್ದಿ ಪ್ರಕಟಿಸದಂತೆ ಕೋರ್ಟ್ ನಿಂದ ತಡೆಯಾಜ್ಞೆ ಕೂಡ ತಂದಿದ್ದಾರೆ.

Comments are closed.