ಕರಾವಳಿ

ಕರಾವಳಿ ಬೈಪಾಸ್’ನಿಂದ ಅಂಬಾಗಿಲು ರಾಷ್ಟ್ರೀಯ ಹೆದ್ದಾರಿಯಲ್ಲಿ ದಾರಿ ದೀಪಕ್ಕೆ ಆಗ್ರಹಿಸಿ ದೊಂದಿ ಹಚ್ಚಿ ಪ್ರತಿಭಟನೆ

Pinterest LinkedIn Tumblr

ಉಡುಪಿ: ರಾಷ್ಟ್ರೀಯ ಹೆದ್ದಾರಿ 66 ಕರಾವಳಿ ಬೈಪಾಸ್ ನಿಂದ ಅಂಬಾಗಿಲು ಜಂಕ್ಷನ್ ತನಕ ದಾರಿದೀಪ ಕೆಟ್ಟುಹೋಗಿದ್ದು ಪಾದಚಾರಿಗಳು ಅದರಲ್ಲೂ ವಿಶೇಷವಾಗಿ ಹೆಣ್ಣು ಮಕ್ಕಳು ಭಯಭೀತರಾಗಿ ನಡೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ದಿನಂಪ್ರತಿ ಅಪಘಾತಗಳು ಸಂಭವಿಸುತ್ತಿವೆ ಈ ಸಮಸ್ಯೆಯ ಬಗ್ಗೆ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಇಲಾಖೆಯ ಗಮನಸೆಳೆಯಲು ದಿನಂಪ್ರತಿ ದೊಂದಿ ಅಥವಾ ಚಿಮಣಿಯನ್ನು ಉರಿಸಿ ವಿಭಿನ್ನ ರೀತಿಯ ಪ್ರತಿಭಟನೆಗೆ ಚಾಲನೆ ನೀಡಲಾಯಿತು.

ಸಮಸ್ಯೆ ಬಗೆಹರಿಯುವವರೆಗೆ ಪ್ರತಿದಿನ ಇದೇ ರೀತಿ ಅಥವಾ ಚಿಮಣಿಯನ್ನು ಆ ಉರಿಸಿ ಪಾದಚಾರಿಗಳಿಗೆ ನಮ್ಮಿಂದಾಗುವಷ್ಟು ಬೆಳಕು ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷರಾದ ಅನ್ಸಾರ್ ಅಹಮದ್ ರವರು ತಿಳಿಸಿರುತ್ತಾರೆ.

ಸಂದರ್ಭದಲ್ಲಿ ಸುಧೀರ್ ಪೂಜಾರಿ ಉಡುಪಿ ತಾಲೂಕು ಅಧ್ಯಕ್ಷರು, ಶಾಹಿಲ್ ರಹಮತುಲ್ಲಾ ಮಂಜು ನಾಸಿರ್ ಯಾಕೂಬ್, ಸುಹೇಲ್, ಇಂತಿಯಾಜ್, ಹಸನ್ ಸಾಹೇಬ್, ಅನಿಲ್ ಸೇರಿದಂತೆ 25 ಕಾರ್ಯಕರ್ತರು ಉಪಸ್ಥಿತರಿದ್ದರು.

Comments are closed.