ಉಡುಪಿ: ಯುವ ಉದ್ಯಮಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಫೆ.2ರ ಬುಧವಾರ ಅಂಬಲಪಾಡಿಯಲ್ಲಿ ನಡೆದಿದೆ.

ಮೃತ ಯುವಕನನ್ನು ಕಾರ್ತಿಕ್ ಪೈ (37) ಎಂದು ಗುರುತಿಸಲಾಗಿದೆ. ಅಂಬಲಪಾಡಿ ಸಮೀಪದ ಮಜ್ಜಿಗೆಪಾದೆ ನಿವಾಸಿಯಾಗಿದ್ದ ಯುವ ಉದ್ಯಮಿ ತಮ್ಮ ಮನೆಯಲ್ಲಿ ಬುಧವಾರ ಬೆಳಗ್ಗೆ ನೇಣಿಗೆ ಶರಣಾಗಿದ್ದಾರೆ.ಕೆಲವು ವೈಯಕ್ತಿಕ ಕಾರಣಗಳಿಂದ ಅವರು ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದುಬಂದಿದ್ದು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.