ನವದೆಹಲಿ: ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರ ಕಾರಿನ ಮೇಲೆ ಮೂರು-ನಾಲ್ಕು ಸುತ್ತಿನ ಗುಂಡಿನ ದಾಳಿ ನಡೆದಿರುವ ಘಟನೆ ಕಿಥೋರ್ ನ ಛಜ್ರಾಸಿ ಟೋಲ್ ಪ್ಲಾಜಾ ಬಳಿ ನಡೆದಿದೆ.
ಉತ್ತರ ಪ್ರದೇಶದ ಮೀರತ್ ನಲ್ಲಿ ಚುನಾವಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ದೆಹಲಿಗೆ ಹಿಂದಿರುಗುತ್ತಿದ್ದಾಗ ಇಬ್ಬರು ವ್ಯಕ್ತಿಗಳು ತಮ್ಮ ವಾಹನದ ಮೇಲೆ ಮೂರು-ನಾಲ್ಕು ಸುತ್ತು ಗುಂಡು ಹಾರಿಸಿದ್ದಾರೆ ಎಂದು ಓವೈಸಿ ಹೇಳಿದ್ದಾರೆ.
ಗುಂಡಿನ ದಾಳಿಯಿಂದಾಗಿ ನನ್ನ ಕಾರಿನ ಟೈಯರ್ ಪಂಕ್ಚರ್ ಆಗಿದ್ದು, ಅಲ್ಲಿಂದ ತಾನು ಮತ್ತೊಂದು ಕಾರಿನಲ್ಲಿ ತೆರಳಿದ್ದಾಗಿ ಅಸಾದುದ್ದೀನ್ ಓವೈಸಿ ತಿಳಿಸಿದ್ದಾರೆ.
Comments are closed.