ಕರಾವಳಿ

3ನೇ ದಿನವೂ ಮುಂದುವರಿದ ಹಿಜಾಬ್ ವಿವಾದ; ಗೇಟ್ ಹೊರಗಡೆಯೇ ಜ್ಯೂನಿಯರ್ ಕಾಲೇಜು ವಿದ್ಯಾರ್ಥಿನಿಯರು

Pinterest LinkedIn Tumblr

ಕುಂದಾಪುರ: ಕುಂದಾಪುರದಲ್ಲಿ ಹಿಜಾಬ್ ವಿವಾದ ಶುಕ್ರವಾರವೂ ಮುಂದುವರಿದಿದೆ. ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಇಂದೂ ಕೂಡಾ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದು, ಕಾಲೇಜು ಆವರಣದೊಳಗೆ ಪ್ರವೇಶ ನಿರಾಕರಣೆ ಮಾಡಿದ ಘಟನೆ ನಡೆದಿದೆ.

 

ಗೇಟ್ ಒಳಕ್ಕೆ ಪ್ರವೇಶಿಸಿದ ವಿದ್ಯಾರ್ಥಿನಿಯರು
ಕಾಲೇಜು ಆವರಣದೊಳಕ್ಕೆ ಪ್ರವೇಶಿಸುವಂತಿಲ್ಲ ಎಂದು ಪ್ರಾಂಶುಪಾಲರು ಸೂಚಿಸಿದ ಹೊರತಾಗಿಯೂ ವಿದ್ಯಾರ್ಥಿಗಳು ಗೇಟ್ ತಳ್ಳಿ ಒಳಕ್ಕೆ ಪ್ರವೇಶಿಸಿ ಕಾಲೇಜು ಆವರಣದಲ್ಲಿ ಇರಲು ಅವಕಾಶ ನೀಡುವಂತೆ ಆಗ್ರಹಿಸಿದರು.

ಪೋಷಕರ ಆಕ್ರೋಷ..
ವಿದ್ಯಾರ್ಥಿನಿಯರನ್ನು ತರಗತಿಗೆ ಸ್ಕಾರ್ಫ್ ಧರಿಸಿ ತೆರಳು ಅನುಮತಿ ನೀಡದ ಕಾಲೇಜು ಆಡಳಿತದ ವಿರುದ್ಧ ಪೊಷಕರು ಆಕ್ಷೇಪಿಸಿ, ಗೇಟ್ ಹೊರಭಾಗದಲ್ಲಿ ನಿಂತು ಪ್ರತಿಭಟಿಸಿದರು. ಇಲ್ಲಿ ಪ್ರತಿಭಟನೆ ಮಾಡುವಂತಿಲ್ಲ ಎಂದು ಕುಂದಾಪುರ ಡಿವೈಎಸ್‌ಪಿ ಹೇಳಿದಾಗ ಮಾತಿನ ಚಕಮಕಿ ನಡೆಯಿತು.

ಕೇಸರಿ ಶಾಲು ಧರಿಸಿದ ವಿದ್ಯಾರ್ಥಿಗಳು
ವಿದ್ಯಾರ್ಥಿನಿಯರು ಸ್ಕಾರ್ಫ್ ಧರಿಸಿ ಕಾಲೇಜು ಆವರಣ ಪ್ರವೇಶಿಸುತ್ತಿದ್ದಂತೆ ಒಂದಷ್ಟು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ತಗರತಿಗಳಲ್ಲಿ ಓಡಾಡಲು ಆರಂಭಿಸಿದರು. ಅವರನ್ನೂ ಹೊರಕ್ಕೆ ಕಳುಹಿಸುವಂತೆ ಪೋಷಕರು ಆಕ್ಷೇಪಿಸಿದಾಗ ಕೆಸರಿ ಶಾಲು ಧರಿಸಿದ ವಿದ್ಯಾರ್ಥಿಗಳನ್ನು ಹೊರಕಳುಹಿಸಲಾಯಿತು.

ಕೆಲ ಕಾಲ ಬಿಗುವಿನ ವಾತಾವರಣ:
ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಜೈ ಶ್ರೀರಾಮ ಘೋಷಣೆ ಕೂಗುತ್ತಾ ಹೊರಬರುತ್ತಿದ್ದಂತೆ ಗೇಟಿನ ಬಳಿ‌ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಹಿಂದೂ ಸಂಘಟನೆ ಹಾಗೂ ಮುಸ್ಲಿಂ ಸಂಘಟನೆಯ ಮುಖಂಡರು ಅವರವರ ಸಮುದಾಯದ ವಿದ್ಯಾರ್ಥಿಗಳ ಪರ ಮಾತಿಗೆ ಮುಂದಾದರು. ಪೊಲೀಸರು ಮುಂದೆ ತಮ್ಮ ತಮ್ಮ ಅಹವಾಲು ಹೇಳಿಕೊಂಡರಾದರೂ ಸರಕಾರದ ಆದೇಶ ಪಾಲನೆ ಅಗತ್ಯವೆಂದು ಪೊಲೀಸರು ಎಲ್ಲರನ್ನೂ ಚದುರಿಸಿದರು. ವಿದ್ಯಾರ್ಥಿಗಳು ಕೇಸರಿ ಶಾಲು ತೆಗೆದು ಮತ್ತೆ ತರಗತಿ ಒಳಗೆ ಪ್ರವೇಶಿಸಿದರೂ, ವಿದ್ಯಾರ್ಥಿನಿಯರು ಸ್ಕಾರ್ಫ್ ತೆಗೆಯಲು ಒಪ್ಪದೇ ಮತ್ತೆ ಗೇಟಿನ ಬಳಿಯೇ ನಿಂತಿದ್ದರು.

Comments are closed.