ಕರಾವಳಿ

ಹಿಜಾಬ್ VS ಕೇಸರಿ: ಕಾಲೇಜು ವಿದ್ಯಾರ್ಥಿಗಳಿಂದ ಕೇಸರಿ ಶಾಲು ಧರಿಸಿ ಮೆರವಣಿಗೆ, ಜೈ ಶ್ರೀರಾಮ್ ಘೋಷಣೆ

Pinterest LinkedIn Tumblr

ಕುಂದಾಪುರ: ಕುಂದಾಪುರದಲ್ಲಿ ನಡೆಯುತ್ತಿರುವ ಹಿಜಾಬ್ ಹಾಗೂ ಕೇಸರಿ ಶಾಲು ಸಂಘರ್ಷ 4ನೇ ದಿನಕ್ಕೆ ಕಾಲಿಟ್ಟಿದೆ. ಹಿಜಾಬ್ ಸಂಘರ್ಷ ಪ್ರಾರಂಭವಾದ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶನಿವಾರ ರಜೆ ನೀಡಿದ್ದು, ಸ್ಥಳೀಯ ಖಾಸಗಿ ಕಾಲೇಜುಗಳಲ್ಲಿ ಹಿಜಾಬ್-ಕೇಸರಿ ಶಾಲು ಸಂಘರ್ಷ ಕೆಲ ಕಾಲ ಬಿಗುವಿನ ವಾತವರಣ ನಿರ್ಮಾಣವಾಯಿತು.

ಶನಿವಾರ ಬೆಳ್ಳಂಬೆಳಿಗ್ಗೆ ಸ್ಥಳೀಯ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರನ್ನು ಒಳಬಿಟ್ಟಿದ್ದರೆಂದು ಕೆಲವು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತ ಪಡಿಸಿದ ಹಿನ್ನೆಲೆಯಲ್ಲಿ ಕಾಲೇಜಿಗೆ ರಜೆ ಘೋಷಿಸಲಾಯಿತು. ಕಾಲೇಜಿನಿಂದ ಹೊರಬಂದ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕುಂದಾಪುರ ಶಾಸ್ತ್ರೀವೃತ್ತದ ತನಕ ಘೋಷಣೆ ಕೂಗುತ್ತಾ ಬಂದರು.

ಭಂಡಾರ್ ಕಾರ್ಸ್ ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕುಂದೇಶ್ವರ ದೇವಸ್ಥಾನದಿಂದ ಘೋಷಣೆ ಕೂಗುತ್ತಾ ಕಾಲೇಜಿನತ್ತ ಹೆಜ್ಜೆ ಹಾಕಿದರು. ದೊಡ್ಡ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಜೈ ಶ್ರೀರಾಮ್, ಜೈ ಶಿವಾಜಿ ಎಂದು ಘೋಷಣೆ ಕೂಗುತ್ತಾ ಮುಖ್ಯರಸ್ತೆಯಲ್ಲಿ ಸಾಗಿಬಂದು ಕಾಲೇಜಿನ ಆವರಣಕ್ಕೆ ಬಂದರು. ಕಾಲೇಜು ಆಡಳಿತ ಯಾವುದೇ ವಿದ್ಯಾರ್ಥಿಯೂ ಕೇಸರಿ ಶಾಲು, ಹಿಜಾಬ್ ಧರಿಸಿ ಕಾಲೇಜು ಆವರಣ ಪ್ರವೇಶ ಮಾಡಬಾರದೆಂದು ಸೂಚನೆ ನೀಡಿತ್ತು. ಪ್ರತಿಯೊಂದು ವಿದ್ಯಾರ್ಥಿಯನ್ನು ಕಾಲೇಜು ಸಿಬ್ಬಂದಿಗಳು ಗೇಟ್ ಹತ್ತಿರ ತೀವ್ರ ತಪಾಸಣೆ ಮಾಡಿಯೇ ಕಾಲೇಜು ಒಳ ಬಿಟ್ಟರು.

ಕಾಲೇಜು ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಕೆ.ಎಸ್.ಆರ್.ಪಿ ಹಾಗೂ ಡಿ.ಎ.ಆರ್ ವಾಹನ ನಿಯೋಜಿಸಲಾಗಿತ್ತು.

Comments are closed.