ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಪತ್ತೆಯಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.

ದುಬೈ ನಿಂದ ಮಂಗಳೂರಿಗೆ ಆಗಮಿಸುತ್ತಿದ್ದ ವ್ಯಕ್ತಿಯಿಂದ ಚಿನ್ನ ವಶಕ್ಕೆ ಪಡೆಯಲಾಗಿದೆ. ಲಿಫ್ಸ್ಟಿಕ್ ಪೆನ್ಸಿಲ್ ಹುಡಿ ಮಾದರಿಯಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ನಡೆಸಲಾಗುತ್ತಿತ್ತು ಎಂದು ತಿಳಿದುಬಂದಿದೆ.
127 ಗ್ರಾಂ ತೂಕದ 6,27,380 ರೂಪಾಯಿ ಮೌಲ್ಯ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಸ್ಟಮ್ಸ್ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ.
Comments are closed.