ಕರಾವಳಿ

ಚಿತ್ರದುರ್ಗದಲ್ಲಿ ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ: 5 ವರ್ಷದ ಮಗು ಸಹಿತ ಕುಂದಾಪುರ ಮೂಲದ ಮೂವರು ದುರ್ಮರಣ

Pinterest LinkedIn Tumblr

ಚಿತ್ರದುರ್ಗ: ಜಿಲ್ಲೆಯ ಹೊಸದುರ್ಗ ತಾಲೂಕಿನ ಜೋಡಿ ಶ್ರೀರಂಗಾಪುರದಲ್ಲಿ ನಡೆದ ಭೀಕರ ಅಪಘಾತದಲ್ಲಿ ಉಡುಪಿ ಜಿಲ್ಲೆ ಕುಂದಾಪುರದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಡರಾತ್ರಿ ನಡೆದಿದೆ.

ಮೃತರನ್ನು ಗೀತಾ (32), ಶಾರದಾ (60) ಮತ್ತು ಬಾಲಕಿ ಧೃತಿ (05) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ನಾಗೇಶ (65), ದಯಾನಂದ (66), ಸುಧೀಂದ್ರ (35) ಎಂಬವರು ಗಾಯಗೊಂಡಿದ್ದು, ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಒಂದೇ ಕುಟುಂಬದ ಸದಸ್ಯರು ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದರು. ಈ ವೇಳೆ ಜೋಡಿ ಶ್ರೀರಂಗಾಪುರ ಬಳಿ ರಸ್ತೆ ಬದಿಯ ಮರಕ್ಕೆ ಕಾರು ಢಿಕ್ಕಿಯಾಗಿದೆ. ತಡರಾತ್ರಿ ವೇಳೆ ಈ ಅಪಘಾತ ನಡೆದಿದ್ದು, ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

 

Comments are closed.