ಕರ್ನಾಟಕ

‘ಅಲ್ಲಾಹು ಅಕ್ಬರ್’ ಘೋಷಣೆ ಕೂಗಿದ ಮಂಡ್ಯ ವಿದ್ಯಾರ್ಥಿನಿಗೆ 5 ಲಕ್ಷ ರೂ. ಬಹುಮಾನ ಘೋಷಿಸಿದ ಜಮಾತೆ ಉಲೆಮಾ ಹಿಂದ್

Pinterest LinkedIn Tumblr

ನವದೆಹಲಿ: ಮಂಡ್ಯದಲ್ಲಿ ಹುಡುಗರ ಮುಂದೆ ʼಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಿದ ಪಿಇಎಸ್‌ ಕಾಲೇಜಿನ ವಿದ್ಯಾರ್ಥಿನಿ ಮುಸ್ಕಾನ್‌ ಖಾನ್‌ಗೆ ಜಮಾತ್‌ ಉಲೆಮಾ-ಎ-ಹಿಂದ್‌ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಪ್ರಕಟಿಸಿದೆ.

ಕಾಲೇಜಿನಲ್ಲಿ ಹುಡುಗರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಾಗ ಮುಸ್ಕಾನ್‌ ‘ಅಲ್ಲಾಹು ಅಕ್ಬರ್’ ಎಂದು ಕೂಗಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್‌ ವೈರಲ್‌ ಆಗಿದೆ. ವೈರಲ್‌ ಆದ ಬೆನ್ನಲ್ಲೇ ಜಮಾತ್‌ ಉಲೆಮಾ-ಎ-ಹಿಂದ್‌ ಟ್ವೀಟ್‌ ಮಾಡಿ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಣೆ ಮಾಡಿದೆ.

ನಾನು ಎಂದಿನಂತೆ ಬುರ್ಕಾ ಧರಿಸಿ ಕಾಲೇಜು ಪ್ರವೇಶಿಸಿದೆ. ಈ ವೇಳೆ ಗುಂಪೊಂದು ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗಿತು. ನಾನು ಪ್ರತಿಯಾಗಿ ‘ಅಲ್ಲಾಹು ಅಕ್ಬರ್’ ಎಂದು ಕೂಗಿದೆ. ಆ ಗುಂಪಿನಲ್ಲಿದ್ದವರಲ್ಲಿ ಕೇವಲ ಶೇ.10ರಷ್ಟು ಮಂದಿ ಮಾತ್ರ ನಮ್ಮ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಉಳಿದ ಯುವಕರು ಹೊರಗಿನಿಂದ ಬಂದವರಾಗಿದ್ದರು. ಶಿಕ್ಷಣವೇ ನಮ್ಮ ಆದ್ಯತೆ. ಆದರೆ ಅವರು ಅದನ್ನೂ ಕಸಿದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ನಾವು ಯಾವಾಗಲೂ ಬುರ್ಕಾ ಮತ್ತು ಹಿಜಬ್ ಧರಿಸಿಯೇ ಕಾಲೇಜಿಗೆ ಬರುತ್ತಿದ್ದೆವು. ಕಾಲೇಜಿಗೆ ಬಂದಾಗ ಬುರ್ಕಾ ತೆಗೆದು, ಹಿಜಬ್ ಮಾತ್ರ ಹಾಕಿಕೊಂಡು ತರಗತಿಯಲ್ಲಿ ಕೂರುತ್ತಿದ್ದೆವು. ಯಾವಾಗಲೂ ಇದಕ್ಕೆ ವಿರೋಧ ಇರಲಿಲ್ಲ. ಆದರೆ ಒಂದು ವಾರದಿಂದ ಹಿಜಬ್‌ಗೂ ವಿರೋಧ ವ್ಯಕ್ತಪಡಿಸಲಾಗುತ್ತಿದೆ.

ಮುಸ್ಲಿಂ ಸಮುದಾಯದ ಹೆಣ್ಣುಮಕ್ಕಳ ಒಂದು ಭಾಗ ಹಿಜಬ್. ನಾವು ಹಿಜಬ್‌ಗಾಗಿ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ ಎಂದು ವಿದ್ಯಾರ್ಥಿನಿ ಘಟನೆ ಕುರಿತು ಮಾತನಾಡಿದ್ದಾರೆ.

Comments are closed.