ಮಂಗಳೂರು: ಟಿಕ್ ಟಾಕ್ ಹಾಸ್ಯ ವಿಡಿಯೋಗಳಲ್ಲಿ ಕಾಣಿಸಿಕೊಂಡು ಅಪಾರ ಅಭಿಮಾನಿಗಳನ್ನು ಹೊಂದಿದ್ದ, ಅನಂತಾಡಿ ಗ್ರಾಮದ ಮಾಮೇಶ್ವರ ಸಂಕೇಶ ನಿವಾಸಿ ಟಿಕ್ ಟಾಕ್ ಕಮಲಜ್ಜಿ ಯಾನೆ ಕಮಲ (85) ಅವರು ಫೆ.9ರಂದು ಅಸೌಖ್ಯದಿಂದ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಆರು ಪುತ್ರರು, ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಟಿಕ್ ಟಾಕ್ ಸ್ಟಾರ್ ಧನರಾಜ್ ಜೊತೆ ಕಮಲಜ್ಜಿ 50ಕ್ಕೂ ಅಧಿಕ ವಿಡಿಯೋಗಳಲ್ಲಿ ಕಾಣಿಸಿಕೊಂಡಿದ್ದು, ಇವರ ಕುಟುಂಬವೇ ಟಿಕ್ ಟಾಕ್ ಫ್ಯಾಮಿಲಿ ಎಂದು ಹೆಸರು ಪಡೆದಿತ್ತು.
ಇಳಿವಯಸ್ಸಿನಲ್ಲೂ ಇವರು ಟಿಕ್ ಟಾಕ್ ವಿಡಿಯೋಗಳಲ್ಲಿ ತೋರುತ್ತಿದ್ದ ಅಭಿನಯ, ಮಾತಿನ ವೇಗ, ಮನೆಮಂದಿಯ ಜೊತೆ ಬೆರೆಯುತ್ತಿದ್ದ ದೃಶ್ಯಾವಳಿಗಳಿಂದಾಗಿ ತಮ್ಮದೇ ಆದ ಅಭಿಮಾನಿ ವರ್ಗವನ್ನು ಅವರು ಪಡೆದಿದ್ದು ಪ್ರಸೂತಿ ತಜ್ಞೆಯಾಗಿದ್ದರು.
ಕಮಲಜ್ಜಿಯ ನಿಧನಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಸಹಿತ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.
Comments are closed.