ಶ್ರೀನಿವಾಸಪುರ: ಪಟ್ಟಣದಲ್ಲಿ ಮದುವೆ ಆರತಕ್ಷತೆ ನಡೆಯುತ್ತಿದ್ದಾಗ ವಧು ದಿಢೀರ್ ಕುಸಿದು ಬಿದ್ದು, ಆಕೆಯ ಮೆದುಳು ನಿಷ್ಕ್ರಿಯಗೊಂಡಿದ್ದು ಆಕೆಯ ಪೋಷಕರು ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದಿರುವ ಘಟನೆ ನಡೆದಿದೆ.
ಮದುಮಗಳು ಚೈತ್ರಾ(26) ಇಹಲೋಕ ತ್ಯಜಿಸಿದ ದುರ್ದೈವಿ. ಮದುವೆ ಅರತಕ್ಷತೆ ನಡೆಯುತ್ತಿದ್ದಾಗ ಚೈತ್ರಾ ವೇದಿಕೆ ಮೇಲೆ ದಿಢೀರ್ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ನಿಮ್ಹಾನ್ಸ್‌ಗೆ ಸೇರಿಸಲಾಗಿದೆ.
ವೈದ್ಯರು ಮೆದುಳು ನಿಷ್ಕ್ರಿಯವಾಗಿದೆ ಎಂದು ಹೇಳಿದ್ದಾರೆ. ಇದರಿಂದ ಕಂಗಾಲಾದ ಪೋಷಕರು ಆಕೆಯ ಅಂಗಾಂಗ ದಾನ ಮಾಡಿ ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಈ ಬಗ್ಗೆ ಸಚಿವ ಡಾ.ಕೆ.ಸುಧಾಕರ್ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
Comments are closed.