ಕರಾವಳಿ

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ತುಂಬೆ ಬಳಿ ಪಲ್ಟಿ – ಹಲವರಿಗೆ ಗಾಯ

Pinterest LinkedIn Tumblr

ಮಂಗಳೂರು: ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾದ ಘಟನೆ ಫೆಬ್ರವರಿ 14 ಸೋಮವಾರ ರಾತ್ರಿ ತುಂಬೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದ ಪರಿಣಾಮ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.

ನಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ತುಂಬೆ ಬಳಿಯ ಬಿಎ ಕಾಲೇಜಿನಿಂದ ಸ್ವಲ್ಪ ದೂರದಲ್ಲಿ ಅಪಾಯಕಾರಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಗಾಯಗೊಂಡ ಪ್ರಯಾಣಿಕರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಕೆಲವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅಪಘಾತದ ಪರಿಣಾಮ ಬಸ್ ಟ್ಯಾಂಕ್‌ನಿಂದ ಡೀಸೆಲ್ ಸೋರಿಕೆಯಾಗತೊಡಗಿದ್ದು ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು ಹೆಚ್ಚಿನ ಹಾನಿಯಾಗದಂತೆ ಕ್ರಮಕೈಗೊಂಡಿದ್ದಾರೆ.

Comments are closed.