ಕರ್ನಾಟಕ

ಸ್ಯಾಂಡಲ್‍ವುಡ್‍ನ ಹಿರಿಯ ನಟಿ ಭಾರ್ಗವಿ ನಾರಾಯಣ್ ವಿಧಿವಶ

Pinterest LinkedIn Tumblr

ಬೆಂಗಳೂರು: ಸ್ಯಾಂಡಲ್‍ವುಡ್‍ನ ಹಿರಿಯ ನಟಿ ಭಾರ್ಗವಿ ಅವರು ಇಂದು ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ.

84 ವರ್ಷದ ಭಾರ್ಗವಿ ಅವರು ಸಿನಿಮಾ, ಕಿರುತೆರೆ ಹಾಗೂ ರಂಗಭೂಮಿಯಲ್ಲಿ ಸಕ್ರಿಯರಾಗಿದ್ದರು. ಇನ್ನು ತಮ್ಮ ಅಜ್ಜಿಯ ನಿಧನದ ಸಂಬಂಧ ನಟಿ ಸಂಯುಕ್ತಾ ಹೊರನಾಡು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

2019ರಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದ ಭಾರ್ಗವಿ ಅವರು, ಎರಡು ಕನಸು, ಹಂತಕರ ಸಂಚು, ಪಲ್ಲವಿ ಅನುಪಲ್ಲವಿ, ವಂಶವೃಕ್ಷ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದರು.

ಭಾರ್ಗವಿ ನಾರಾಯಣ್ ಅವರು ನಂಜುಡಯ್ಯ ನಾರಾಯಣ ಅವರನ್ನು ವಿವಾಹವಾಗಿದ್ದು ದಂಪತಿಗೆ ನಟರಾದ ಪ್ರಕಾಶ್ ಬೆಳವಾಡಿ, ಸುಧಾ ಬೆಳವಾಡಿ ಸೇರಿ ನಾಲ್ಕು ಮಕ್ಕಳಿದ್ದಾರೆ.

Comments are closed.