ಕರ್ನಾಟಕ

ಹಿಜಾಬ್ ಕುರಿತ ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳಿದ ಶಾಸಕ ಜಮೀರ್ ಅಹ್ಮದ್

Pinterest LinkedIn Tumblr

ಬೆಂಗಳೂರು: ಹೆಣ್ಣು ಮಕ್ಕಳು ಹಿಜಾಬ್ ಧರಿಸದೇ ಹೋದರೆ ರೇಪ್ ಆಗುತ್ತವೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿ, ಸ್ವಪಕ್ಷದಲ್ಲಿಯೇ ಟೀಕೆಗೆ ಗುರಿಯಾಗಿದ್ದ ಶಾಸಕ ಜಮೀರ್ ಅಹ್ಮದ್ ಖಾನ್ ಟ್ವೀಟರ್ ಮೂಲಕ ಕ್ಷಮೆ ಕೇಳಿದ್ದಾರೆ.

ಯಾರ ಮನಸ್ಸನ್ನಾದರೂ ನೋಯಿಸುವ ಇಲ್ಲವೇ ಅಗೌರವ ತೋರಿಸುವ ದುರುದ್ದೇಶ ನನಗಿಲ್ಲ. ಹೆಣ್ಣು ಮಕ್ಕಳ ಮೇಲಿನ ಕಾಳಜಿಯಿಂದ ಹಾಗೆ ಹೇಳಿದೆಯ ನನ್ನ ಹೇಳಿಕೆಯನ್ನು ತಿರುಚಲಾಗಿದ್ದು, ಆ ಬಗ್ಗೆ ವಿಷಾಧವಿದೆ ಎಂದಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಜಮೀರ್ ಅಹ್ಮದ್ ಖಾನ್, ಹೆಣ್ಣು ಮಕ್ಕಳ ಅತ್ಯಾಚಾರಕ್ಕೆ ಅವರ ಮೈ ಮೇಲಿನ ಬಟ್ಟೆ ಖಂಡಿತಾ ಕಾರಣ ಅಲ್ಲ. ಮೈ ತುಂಬಾ ಬಟ್ಟೆ ಹಾಕಿದರೂ, ಹಾಕದೆ ಇದ್ದರೂ ಅತ್ಯಾಚಾರ ನಡೆಯುತ್ತಲೇ ಇರುತ್ತದೆ. ಇದಕ್ಕೆ ಕೆಲವು ಪುರುಷರಲ್ಲಿರುವ ರೇಪಿಸ್ಟ್ ಮನಸ್ಥಿತಿ ಕಾರಣ. ಹೆಣ್ಣು ಮಕ್ಕಳ ಅತ್ಯಾಚಾರ ಕಡಿಮೆಯಾಗಬೇಕಾದರೆ ಮೊದಲು ಪುರುಷರು ಬದಲಾಗಬೇಕು ಎಂದು ಅವರು ಹೇಳಿದರು. ಶಿಕ್ಷಣಕ್ಕಿಂತ ಶಕ್ತಿಯುತವಾದ ಅಸ್ತ್ರ ಬೇರೆ ಇಲ್ಲ. ಆದ್ದರಿಂದ ಹಿಜಾಬ್- ಬುರ್ಖಾದ ಕಾರಣ ನೀಡಿ ದಯವಿಟ್ಟು, ಮುಸ್ಲಿಂ ಹೆಣ್ಣು ಮಕ್ಕಳಿಗೆ ಶಿಕ್ಷಣವನ್ನು ನಿರಾಕರಿಸಬೇಡಿ ಎಂದು ಸರ್ಕಾರ ಮತ್ತು ಸಮಾಜವನ್ನು ಕೈ ಮುಗಿದು ಬೇಡಿಕೊಳ್ಳುತ್ತೇನೆ ಎಂದಿದ್ದಾರೆ.

ಜಮೀರ್ ಅಹಮದ್ ಅವರ ಹಿಜಾಬ್ ಕುರಿತ ವಿವಾದಾತ್ಮಕ ಹೇಳಿಕೆಯನ್ನು ರಾಜ್ಯ ಎಐಸಿಸಿ ಉಸ್ತುವಾರಿ ರಣದೀಪ್ ಸುರ್ಜೀವಾಲ ಟ್ವೀಟ್ ಮೂಲಕ ಖಂಡಿಸಿದ್ದರು. ಆಧುನಿಕ ಭಾರತದಲ್ಲಿ ಇಂತಹ ವಿಚಾರಗಳಿಗೆ ಅವಕಾಶವಿಲ್ಲ, ನಾಯಕರು ಸಂಕುಚಿತ ಮನೋಭಾವದಿಂದ ಹೊರಬರಬೇಕು ಎಂದು ಹೇಳಿದ್ದರು.

Comments are closed.