ಬೆಂಗಳೂರು: ರಾಜ್ಯಾದ್ಯಂತ ಸುದ್ದಿಮಾಡಿದ್ದ ಹಿಜಾಬ್, ವಿವಾದಕ್ಕೆ ಸಂಬಂದಿಸಿದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ತ್ರಿ ಸದಸ್ಯ ಪೀಠ ನಾಳೆಗೆ (ಫೆ.16 ಬುಧವಾರ) ಮುಂದೂಡಿದೆ.
ಅರ್ಜಿದಾರರ ಪರ ವಕೀಲ ದೇವದತ್ ಕಾಮತ್ ಅವರ ಸುದೀರ್ಘ ವಾದ ಮಂಡನೆ ಆಲಿಸಿದ ಸಿಜೆ ರಿತುರಾಜ್ ಅವಸ್ತಿ, ನ್ಯಾ.ಕೃಷ್ಣ ದೀಕ್ಷಿತ್ ಹಾಗೂ ನ್ಯಾ.ಖಾಜಿ ಜೈಬುನ್ನೀಸಾ ಮೊಹಿದ್ದೀನ್ ನೇತೃತ್ವದ ತ್ರಿಸದಸ್ಯ ಪೀಠ, ವಿಚಾರಣೆಯನ್ನು ನಾಳೆ ಮಧ್ಯಾಹ್ನ 2:30ಕ್ಕೆ ಮುಂದೂಡಿದೆ.
ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹಲವು ವಕೀಲರು ವಾದ ಮಂಡನೆಗೆ ಹಕ್ಕು ಮಂಡಿಸಿದ್ದು ಯುವತಿಯ ಎರಡನೇ ಅರ್ಜಿ ಸಂಬಂಧ ಹಿರಿಯ ವಕೀಲ ರವಿವರ್ಮ ಕುಮಾರ್ ಕೂಡ ವಾದ ಮಂಡಿಸಿದ್ದಾರೆ.
ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಸುದೀರ್ಘ ವಾದ-ಪ್ರತಿವಾದಗಳು ಮಂಡನೆಯಾಗಲಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ತ್ರಿಸದಸ್ಯ ಪೀಠ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದೆ.
Comments are closed.