ಕರಾವಳಿ

ಹಿಜಾಬ್ ಧರಿಸಿದ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಿದ ಉಡುಪಿ ಮಿಲಾಗ್ರಿಸ್ ಕಾಲೇಜು

Pinterest LinkedIn Tumblr

ಉಡುಪಿ: ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ತರಗತಿ ಪ್ರವೇಶ ತಡೆದಿರುವ ಘಟನೆ ಮಿಲಾಗ್ರಿಸ್ ಕಾಲೇಜಿನಲ್ಲಿ ನಡೆದಿದ್ದು, ಕಾಲೇಜು ಗೇಟ್‌ನಲ್ಲಿ ನೂರಾರು ವಿದ್ಯಾರ್ಥಿಗಳು ಜಮಾಯಿಸಿದ ಘಟನೆ ನಡೆದಿದೆ.

ಮುಸ್ಲಿಂ ವಿದ್ಯಾರ್ಥಿನಿಯರು ಮತ್ತು ವಿದ್ಯಾರ್ಥಿಗಳು ಕಾಲೇಜು ಗೇಟ್ ಹೊರಗೆ ನಿಂತಿರುವುದು ಕಂಡುಬಂದಿದ್ದು, ಅವರಲ್ಲಿ ಕೆಲವರು ಪಿಯುಸಿ ಹಾಗೂ ಪದವಿ ವ್ಯಾಸಂಗ ಮಾಡುತ್ತಿರುವವರಾಗಿದ್ದಾರೆ.

ಮುಸ್ಲಿಂ ವಿದ್ಯಾರ್ಥಿನಿಯರು ಬುರ್ಖಾ ಮತ್ತು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದಕ್ಕೆ ಅವರ ಪ್ರವೇಶವನ್ನು ನಿರಾಕರಿಸಲಾಗಿದ್ದು, ಆವರಣದಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿತ್ತು.

ಕಳೆದ ಮೂರು ದಿನಗಳಿಂದ ಹಿಜಾಬ್ ಧರಿಸಿರುವ ಹುಡುಗಿಯರಿಗೆ ಕಾಲೇಜು ಪ್ರವೇಶ ನಿರಾಕರಿಸುತ್ತಿದೆ ಎಂದು ವಿದ್ಯಾರ್ಥಿನಿ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಈ ಹಿಂದೆ ಕಾಲೇಜು ತರಗತಿಯೊಳಗೆ ಹಿಜಾಬ್‌ಗೆ ಅವಕಾಶ ನೀಡಿತ್ತು, ಆದರೆ ಈಗ ಹೈಕೋರ್ಟ್‌ನ ಮಧ್ಯಂತರ ಆದೇಶ ಮತ್ತು ಕರ್ನಾಟಕ ಸರ್ಕಾರದ ಸೂಚನೆಗಳನ್ನು ಅನುಸರಿಸಿ ಅದನ್ನು ನಿರ್ಬಂಧಿಸಿದೆ ಎಂದು ಕಾಲೇಜ್ ಮೂಲಗಳು ತಿಳಿಸಿದೆ.

Comments are closed.