ಕರಾವಳಿ

ಶಿವಮೊಗ್ಗದಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತನಾಗಿದ್ದ ಯುವಕನ‌ ಬರ್ಬರ ಹತ್ಯೆ

Pinterest LinkedIn Tumblr

ಶಿವಮೊಗ್ಗ: ಇಲ್ಲಿನ ಸೀಗೆಹಟ್ಟಿಯಲ್ಲಿ ಹಿಂದೂ ಪರ ಸಂಘಟನೆಯ ಯುವಕನೊಬ್ಬನನ್ನು ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿ ಪರಾರಿಯಾದ ಘಟನೆ ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ನಡೆದಿದೆ. ಹರ್ಷ (25) ಕೊಲೆಯಾದ ಯುವಕ.

ದೊಡ್ಡಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾತ್ರಿ 9.30ರ ಸುಮಾರಿಗೆ ಭಾರತಿ ಕಾಲೋನಿ ಬಳಿ ಚಹಾ ಕುಡಿಯುತ್ತಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಪರಿಸ್ಥಿತಿ ಉದ್ವಿಗ್ನಗೊಂಡ ಕಾರಣ ಎರಡು ದಿನ ನಿಷೇಧಾಜ್ಞೆ ಘೋಷಿಸಲಾಗಿದ್ದು, ಬಿಗಿ ಬಂದೋಬಸ್ತ್ ಮಾಡಲಾಗಿದೆ. ಇಂದು (ಸೋಮವಾರ) ಶಿವಮೊಗ್ಗ ನಗರವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ.

Comments are closed.