ಬೆಂಗಳೂರು: ಹಿಜಾಬ್ ವಿವಾದ ಕುರಿತ ಕರ್ನಾಟಕ ಹೈಕೋರ್ಟ್ ಆದೇಶವನ್ನು ಎಲ್ಲಾ ವಿದ್ಯಾರ್ಥಿಗಳು ಮತ್ತು ಪೋಷಕರು ಗೌರವಿಸಬೇಕು, ಪಾಲಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹಿಜಾಬ್ ವಿವಾದಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಹಲವು ವಾದ-ವಿವಾದಗಳನ್ನು ಆಲಿಸಿ ಇಂದು ಮಹತ್ವದ ಐತಿಹಾಸಿಕ ತೀರ್ಪು ನೀಡಿದ್ದು ತೀರ್ಪು ಹೊರಬಂದ ನಂತರ ಮಾಧ್ಯಮ ಪ್ರತಿನಿಧಿಗಳ ಮುಂದೆ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿದ್ದಾರೆ.

ಹೈಕೋರ್ಟ್ ತೀರ್ಪು ಹೊರಬಂದಿದ್ದು ವಿದ್ಯಾರ್ಥಿಗಳು ಈ ವಿಚಾರದಲ್ಲಿ ಹಠ ಮುಂದುವರಿಸಿ ತಮ್ಮ ವಿದ್ಯಾಭ್ಯಾಸವನ್ನು, ಭವಿಷ್ಯ ಜೀವನವನ್ನು ಹಾಳು ಮಾಡಿಕೊಳ್ಳುವುದು ಬೇಡ, ಶಿಕ್ಷಣ ಬಹಳ ಮುಖ್ಯ. ಯಾವುದೇ ಕಾರಣಕ್ಕೆ ವಿದ್ಯಾಭ್ಯಾಸ ಹಾಳು ಮಾಡಿಕೊಳ್ಳಬೇಡಿ. ಪರೀಕ್ಷೆಗಳಲ್ಲಿ ತೊಡಗಿಸಿಕೊಳ್ಳಿ. ಶಾಲಾ-ಕಾಲೇಜುಗಳಿಂದ ದೂರ ಉಳಿಯಬೇಡಿ ಎಂದು ವಿದ್ಯಾರ್ಥಿಗಳಿಗೆ ಸಿಎಂ ಮನವಿ ಮಾಡಿದ್ದಾರೆ.
Comments are closed.