ಕರ್ನಾಟಕ

ಹಿಜಾಬ್ ವಿವಾದ: ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ಸಿದ್ದತೆ..?

Pinterest LinkedIn Tumblr

ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದ ತೀರ್ಪು ಇಂದು ಪ್ರಕಟವಾಗಿದೆ. ಹೈಕೋರ್ಟ್ ನೀಡಿರುವ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್‌‌ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಅರ್ಜಿದಾರರ ಪರ ವಕೀಲರು ತಿಳಿಸಿದ್ದಾರೆ.

ಹಿಜಾಬ್ ವಿವಾದದ ವಿಚಾರವಾಗಿ ಕರ್ನಾಟಕ ಹೈಕೋರ್ಟ್‌ಐತಿಹಾಸಿಕ ತೀರ್ಪು ಪ್ರಕಟಿಸಿದ್ದು, ತರಗತಿಗಳಿಗೆ ಸಮವಸ್ತ್ರ ಧರಿಸಿಯೇ ಆಗಮಿಸಬೇಕೆಂದು ಆದೇಶಿಸಿದೆ. ಆದರೆ ಈ ತೀರ್ಪಿನ ಬೆನ್ನಲ್ಲೇ ವಿದ್ಯಾರ್ಥಿಗಳ ಪರ ವಕೀಲರು ಈ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ಸಿದ್ಧತೆ ಆರಂಭಿಸಿದ್ದಾರೆ.

ಇನ್ನು ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ವಕ್ಫ್‌ ಬೋರ್ಡ್‌ ನಿರ್ಧರಿಸಿದ್ದು, ತೀರ್ಪಿನ ಬೆನ್ನಲ್ಲೇ ಪ್ರತಿಕ್ರಿಯಿಸಿದ ವಕ್ಫ್ ಬೋರ್ಡ್‌ ಅಧ್ಯಕ್ಷ ಶಾಫಿ ಸಾದಿ ಮೂವರು ಜಡ್ಜ್‌ಗಳಲ್ಲಿ ಒಬ್ಬರು ಮುಸಲ್ಮಾನರಾಗಿದ್ದರು. ಹಿಜಾಬ್ ಕಕುರಾನ್‌ನಲ್ಲಿ ಕಡ್ಡಾಯ ಎನ್ನಲಾಗಿದೆ. ಯಾವ ಆಧಾರದ ಮೇಲೆ ತೀರ್ಪು ಕೊಟ್ಟಿದ್ದಾರೆ ಗೊತ್ತಿಲ್ಲ. ಹೀಗಾಗಿ ಧಾರ್ಮಿಕ ಮುಖಂಡರೊಂದಿಗೆ ಚರ್ಚಿಸಿ ಸುಪ್ರೀಂ ಕೋರ್ಟ್‌ಗೆ ಹೋಗುವ ನಿರ್ಧಾರ ಕೈಗೊಳ್ಳುತ್ತೇವೆ ಎಂದಿದ್ದಾರೆ.

Comments are closed.