ಅಂತರಾಷ್ಟ್ರೀಯ

ಉಕ್ರೇನ್‌ನಲ್ಲಿ ಶೆಲ್ ದಾಳಿಗೆ ಬಲಿಯಾದ ನವೀನ್ ಮೃತದೇಹ ಭಾನುವಾರ ರಾಜ್ಯಕ್ಕೆ ಬರಲಿದೆ: ಸಿಎಂ ಬೊಮ್ಮಾಯಿ

Pinterest LinkedIn Tumblr

ಬೆಂಗಳೂರು: ಉಕ್ರೇನ್ ಖಾರ್ಕಿವ್‌ನಲ್ಲಿ ಮಾರ್ಚ್ 1 ರಂದು ರಷ್ಯಾ ನಡೆಸಿದ ಶೆಲ್ ದಾಳಿಗೆ ಬಲಿಯಾದ ನವೀನ್ ಎಸ್ ಜಿ ಅವರ ಮೃತದೇಹ ಭಾನುವಾರ ಬೆಂಗಳೂರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನವೀನ್ ಅವರ ಪಾರ್ಥಿವ ಶರೀರ ಭಾನುವಾರ ಮುಂಜಾನೆ 3 ಗಂಟೆ ಸುಮಾರಿಗೆ ಬೆಂಗಳೂರಿಗೆ ಆಗಮಿಸಲಿದೆ ಎಂದು ಸಿಎಂ ಬೊಮ್ಮಾಯಿ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ನಾಲ್ಕನೇ ವರ್ಷದ ವೈದ್ಯಕೀಯ ವಿದ್ಯಾರ್ಥಿ ನವೀನ್ ಅವರು ಖಾರ್ಕಿವ್ ನಗರದಲ್ಲಿ ಸ್ವಲ್ಪ ಆಹಾರ, ನೀರು ಮತ್ತು ಹಣವನ್ನು ವಿನಿಮಯ ಮಾಡಿಕೊಳ್ಳಲು ತನ್ನ ಬಂಕರ್‌ನಿಂದ ಹೊರಬಂದಾಗ ರಷ್ಯಾ ನಡೆಸಿದ ಶೆಲ್ ದಾಳಿಗೆ ಬಲಿಯಾಗಿದ್ದರು.

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ 22 ವರ್ಷದ ವಿದ್ಯಾರ್ಥಿ ಶೇಖರಪ್ಪ ಗ್ಯಾನಗೌಡ ಅವರ ಎರಡನೇ ಪುತ್ರನಾಗಿದ್ದು, ಅಂತಿಮ ವಿಧಿವಿಧಾನಕ್ಕಾಗಿ ತನ್ನ ಮಗನ ಶವವನ್ನು ಭಾರತಕ್ಕೆ ತರುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದರು.

ಹಾವೇರಿ ಜಿಲ್ಲೆಯ ಚಳಗೇರಿಯಿಂದ ವೈದ್ಯಕೀಯ ವ್ಯಾಸಂಗಕ್ಕಾಗಿ ನವೀನ್‌ ಉಕ್ರೇನ್‌ಗೆ ತೆರಳಿದ್ದರು. ಈ ಯುವಕ ಮೃತಪಟ್ಟು 21 ದಿನಗಳಾದ ಬಳಿಕ ಮೃತದೇಹ ತಾಯ್ನಾಡಿಗೆ ಬರುತ್ತಿದೆ. ಸೋಮವಾರ ಸಂಜೆ ಹಾವೇರಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.

Comments are closed.