ಕರ್ನಾಟಕ

ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ‌ ಬೆಂಗಳೂರಿನ ಹೆಬ್ಬಾಳದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ದಾರುಣ ಸಾವು

Pinterest LinkedIn Tumblr

ಬೆಂಗಳೂರು: ಬೆಂಗಳೂರಿನ ಹೆಬ್ಬಾಳದ ಫ್ಲೈ ಓವರ್ ಬಳಿ ಭೀಕರ ಅಪಘಾತ ಸಂಭವಿಸಿದೆ.

ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಶಾಲಾ ವಿದ್ಯಾರ್ಥಿನಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.

ಅಪಘಾತದಲ್ಲಿ 15 ವರ್ಷದ ಅಕ್ಷಯಾ ದೇಹ ಛಿದ್ರವಾಗಿತ್ತು. ಆ್ಯಂಬುಲೆನ್ಸ್ ಮೂಲಕ ಬಾಲಕಿಯನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಮಾರ್ಗ ಮಧ್ಯೆ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.

ಭಾನುವಾರ ಬೆಂಗಳೂರಿನ ಕೆಲವೆಡೆ ಮಳೆ ಬಿದ್ದಿದ್ದರಿಂದ ಹೆಬ್ಬಾಳದ ಫ್ಲೈ ಓವರ್ ಅಂಡರ್ ಪಾಸಿನಲ್ಲಿ ನೀರು ತುಂಬಿತ್ತು. ಹೀಗಾಗಿ ಮಕ್ಕಳು ಅಂಡರ್ ಪಾಸ್ ನಲ್ಲಿ ಹೋಗದೆ ರಸ್ತೆ ಮೂಲಕ ದಾಟುತ್ತಿದ್ದರು. ಮೃತ ಬಾಲಕಿ ಹಾಗೂ ಮಹಿಳೆ ಇಬ್ಬರು ವಿದ್ಯಾರ್ಥಿಗಳು ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಬಿಬಿಎಂಪಿ ಕಸದ ಲಾರಿ ಬಾಲಕಿಗೆ ಡಿಕ್ಕಿ ಹೊಡೆದಿದೆ.

ಅಂಡರ್ ಪಾಸ್ ನಲ್ಲಿ ನೀರು ನಿಂತಿದ್ದರಿಂದ ಜನರು ರಸ್ತೆಗೆ ಇಳಿಯುತ್ತಿದ್ದರು. ಇದನ್ನು ಗಮನಿಸಿದ ಪೊಲೀಸರು ಬಿಬಿಎಂಪಿಗೆ ಮಾಹಿತಿ ನೀಡಿದ್ದು ಅಂಡರ್ ಪಾಸ್ ನಲ್ಲಿ ತುಂಬಿರುವನ್ನು ನೀರನ್ನು ತೆರವುಗೊಳಿಸುವಂತೆ ಸೂಚಿಸಿದ್ದರು. ಆದರೆ ಬಿಬಿಎಂಪಿ ನಿರ್ಲಕ್ಷ್ಯ ವಹಿಸಿದ್ದು ಇದೀಗ ಬಾಲಕಿಯ ಸಾವಿಗೆ ಕಾರಣವಾಗಿದೆ ಎಂದು ಸಾರ್ವಜನಿಕರು ತೀವ್ರ ಆಕ್ರೋಷ ವ್ಯಕ್ತಪಡಿಸಿದ್ದಾರೆ. ಮೃತ ಬಾಲಕಿಯ ಕುಟುಂಬಿಕರ ಆಕ್ರಂಧನ ಮುಗಿಲು ಮುಟ್ಟಿದೆ.

ಬಿಬಿಎಂಪಿ ಕಸದ ಲಾರಿ ಚಾಲಕನನ್ನು ಆರ್.ಟಿ ನಗರ ಸಂಚಾರಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

Comments are closed.