ಕರ್ನಾಟಕ

ಬೆಳ್ಳಂಬೆಳಿಗ್ಗೆ ಬಿಡಿಎ ಮಧ್ಯವರ್ತಿಗಳು, ಏಜೆಂಟ್’ಗಳಿಗೆ ಎಸಿಬಿ ಶಾಕ್: ಬೆಂಗಳೂರಿನ 9 ಕಡೆ ಏಕಕಾಲಕ್ಕೆ ದಾಳಿ..!

Pinterest LinkedIn Tumblr

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳಗ್ಗೆ ಹಲವು ಅಧಿಕಾರಿಗಳ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಇಂದು ಬೆಂಗಳೂರಿನ 9 ಕಡೆಗಳಲ್ಲಿ ನೂರಕ್ಕೂ ಹೆಚ್ಚು ಅಧಿಕಾರಿಗಳಿಂದ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.

ಎಸ್​ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ ಹಾಗೂ ಇನ್ನಿತರ ಜಾಗಗಳ ಮೇಲೆ ದಾಳಿ ನಡೆದಿದ್ದು, ಕಡತಗಳ ಪರಿಶೀಲನೆಯನ್ನು ನಡೆಸಲಾಗುತ್ತಿದೆ.

ಮಧ್ಯವರ್ತಿಗಳು, ಏಜೆಂಟರು, ಭ್ರಷ್ಟ-ಅಕ್ರಮ ವಿಧಾನಗಳಿಂದ ಸಾರ್ವಜನಿಕ ಸೇವಕರ ಮೇಲೆ ಪ್ರಭಾವ ಬೀರುವ, ತಮ್ಮ ವೈಯಕ್ತಿಕ ಪ್ರಭಾವದ ಮೂಲಕ ಬೆಂಗಳೂರಿನ ಚಟುವಟಿಕೆಗಳಲ್ಲಿ ಅವ್ಯವಹಾರಗಳು ಮತ್ತು ಇತರ ಅಕ್ರಮಗಳಲ್ಲಿ ತೊಡಗಿರುವ ಶಂಕಿತರಿಗೆ ಸಂಬಂಧಿಸಿದ 9 ವಿವಿಧ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಲಾಗಿದೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದ ಮದ್ಯವರ್ತಿಗಳ ನಿವಾಸದ ಮೇಲೆಯೂ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಚಾಮರಾಜಪೇಟೆಯ ಬಿ.ಎನ್.ರಘು, ಆರ್’ಟಿ ನಗರ ಬಳಿಯ ಮನೋರಾಯನಪಾಳ್ಯದ ಮೋಹನ್, ದೊಮ್ಮಲೂರಿನ ಮನೋಜ್, ಆರ್.ಆರ್.ನಗರದ ತೇಜು, ಮಲ್ಲತ್ತಹಳ್ಳಿಯ ಮುನಿರತ್ನ ಅಲಿಯಾಸ್ ರತ್ನವೇಲು, ಮುದ್ದಿನಪಾಳ್ಯದ ಅಶ್ವತ್ಥ್ ಹಾಗೂ ಚಿಕ್ಕಹನುಮಯ್ಯ, ಚಾಮುಂಡೇಶ್ವರಿನಗರದ ರಾಮು ಮತ್ತು ಚಾಮುಂಡೇಶ್ವರಿ ನಗರ, ಬಿಡಿಎ ಲೇಔಟ್​ನ ಲಕ್ಷ್ಮಣ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎನ್ನಲಾಗಿದೆ.

Comments are closed.