ಕರಾವಳಿ

ಕೆದೂರು ಗ್ರಾ.ಪಂ ಅಧಿಕಾರಿಗಳ ಕರ್ತವ್ಯಲೋಪ?; ಪಿಡಿಓ ಬದಲಾವಣೆಗೆ ಆಗ್ರಹ-ಕುಂದಾಪುರ ತಾ.ಪಂ ಕಛೇರಿಯೆದುರು ಧರಣಿ

Pinterest LinkedIn Tumblr

(ವರದಿ- ಯೋಗೀಶ್ ಕುಂಭಾಸಿ)

ಕುಂದಾಪುರ: ತಾಲೂಕಿನ ಕೆದೂರು ಗ್ರಾಮ ಪಂಚಾಯತ್ ನಲ್ಲಿ ಅಧಿಕಾರಿಗಳಿಂದ ಸಮರ್ಪಕ ಕೆಲಸವಾಗುತ್ತಿಲ್ಲ. ಅಧಿಕಾರಿಗಳ ಕರ್ತವ್ಯಲೋಪದ ಬಗ್ಗೆ ಅಸಾಮಾಧನ ವ್ಯಕ್ತಪಡಿಸಿ ಹಾಗೂ ಪಿಡಿಓ ಬದಲಾವಣೆಗೆ ಆಗ್ರಹಿಸಿ ಕೆದೂರು ಗ್ರಾಮಪಂಚಾಯತ್ ಜನಪ್ರತಿನಿಧಿಗಳು ಹಾಗೂ ನಾಗರಿಕರು ಕುಂದಾಪುರ ತಾಲೂಕು ಪಂಚಾಯತ್ ಕುಂದಾಪುರ ಎದುರು ಬುಧವಾರ ಧರಣಿ ನಡೆಸಿದರು.

ಕಳೆದ ವರ್ಷ ಅಕ್ಟೋಬರ್ ತಿಂಗಳಿನಲ್ಲಿ ಕೆದೂರಿನಲ್ಲಿ ನಡೆದ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಗೆ ” ಈ ಕಾರ್ಯಕ್ರಮದಲ್ಲಿ ನೀಡಲಾದ ಯಾವ ಮನವಿ, ಕೋರಿಕೆ, ಸಮಸ್ಯೆಗಳಿಗೆ ಒಂದಷ್ಟೂ ಗಮನ ನೀಡದ ಸರಕಾರದ ಅಧಿಕಾರಿಗಳ ಬಗ್ಗೆ ನಂಬಿಕೆಯಿಲ್ಲ ಎಂದು ದೂರಿದರು. ನಾಗರಿಕರ ಪರವಾಗಿ ಮಾತನಾಡಿದ ನಿವೃತ್ತ ಶಿಕ್ಷಣಾಧಿಕಾರಿ ಕೆ. ಸೀತಾರಾಮ ಶೆಟ್ಟಿ ಅವರು, ಪ್ರಜಾಪ್ರಭುತ್ವದ ಬುನಾದಿ ಗ್ರಾಮ ಪಂಚಾಯತ್‌.ಇಲ್ಲಿನ ಆಡಳಿತ ಹದಗೆಟ್ಟರೆ, ನ್ಯಾಯ , ಕಾನೂನು ಹಾಗೂ ಸಾಮಾಜಿಕ ಭದ್ರತೆ ಮುರಿದು ಬಿದ್ದರೆ, ಜನ ಯಾವ ಸರಕಾರವನ್ನು, ಆಡಳಿತವನ್ನು, ಕಾನೂನನ್ನು ನಂಬುವುದಿಲ್ಲ.ಗೂಂಡಾ ರಾಜ್ಯಗಳಿಗೆ ಇದೇ ಕಾರಣವಾಗುತ್ತದೆ ಎಂದರು.

ಕುಂದಾಪುರ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶ್ವೇತಾ ಅವರಿಗೆ ಇದೇ ವೇಳೆ ಮನವಿ ಸಲ್ಲಿಸಲಾಯಿತು. ಎಪ್ರಿಲ್ 15ರೊಳಗೆ ಸಮಸ್ಯೆ ಬಗೆಹರಿಸುವ ಭರವಸೆ ಬಳಿಕ ಪ್ರತಿಭಟನೆ ಹಿಂತೆಗೆದುಕೊಳ್ಳಲಾಯಿತು.

ಈ ವೇಳೆ ಕೆದೂರು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ, ಉಪಾಧ್ಯಕ್ಷೆ ಮಾಲತಿ, ಸದಸ್ಯರಾದ ಭುಜಂಗ ಶೆಟ್ಟಿ, ಸತೀಶ್ ಶೆಟ್ಟಿ, ಪ್ರಶಾಂತ್ ಶೆಟ್ಟಿ, ಗುಬ್ಬಿ, ಜಲಜಾ, ವಿಜಯ ಶೆಟ್ಟಿ, ಉಲ್ಲಾಸ್ ಹೆಗ್ಡೆ, ಜ್ಯೋತಿ, ಸ್ಥಳೀಯರಾದ ಧರ್ಮರಾಜ್ ಮೊದಲಿಯಾರ್, ಶಾರದಾ, ಪ್ರಕಾಶ್ ಮೊದಲಾದವರಿದ್ದರು.

Comments are closed.