ಬೆಂಗಳೂರು: ಸೋಮವಾರದಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿಗಳಿಗೆ ಪ್ರವೇಶಿಸಲು ಅನುಮತಿ ನೀಡಲಾಗುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷೆಗಳನ್ನು ಆಫ್ಲೈನ್ನಲ್ಲಿ ನಡೆಸಲು ವ್ಯವಸ್ಥೆ ಮಾಡಲಾಗಿದೆ. ಧಾರವಾಡದಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ಇತರ ಜಿಲ್ಲೆಗಳಲ್ಲಿಯೂ ಹಿಜಾಬ್ ವಿವಾದ ಪಸರಿಸಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳ ಕೈಗೊಳ್ಳಲಾಗಿದೆ ಎಂದು ಹೇಳಿದರು.
ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಪರೀಕ್ಷಾ ಕೊಠಡಿಗೆ ಪ್ರವೇಶಿಸುವಂತಿಲ್ಲ. ವಿದ್ಯಾರ್ಥಿಗಳು ಹೈಕೋರ್ಟ್ ಆದೇಶವನ್ನು ಗಮನದಲ್ಲಿಟ್ಟುಕೊಂಡು ಡ್ರೆಸ್ ಕೋಡ್ ಪಾಲಿಸಬೇಕು ಎಂದು ಮನವಿ ಮಾಡಿದರು.
Comments are closed.