ಕರ್ನಾಟಕ

ನಾಳೆಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ: ಭಯವಿಲ್ಲದೆ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ಸಿಎಂ ಬೊಮ್ಮಾಯಿ ಕರೆ

Pinterest LinkedIn Tumblr

ಹುಬ್ಬಳ್ಳಿ: ಸೋಮವಾರದಿಂದ ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭವಾಗಲಿದ್ದು, ಪರೀಕ್ಷೆಗೆ ರಾಜ್ಯದಾದ್ಯಂತ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಯಾವುದೇ ಭಯವಿಲ್ಲದೆ ಪರೀಕ್ಷೆ ಬರೆದು, ಭವಿಷ್ಯ ರೂಪಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷೆಗೆ ಎಲ್ಲಾ ರೀತಿಯ ಸಿದ್ಧತೆಗಳು ನಡೆದಿದ್ದು, ವಿದ್ಯಾರ್ಥಿಗಳು ಯಾವುದೇ ಭಯವಿಲ್ಲದೇ ಪರೀಕ್ಷೆ ಬರೆಯಿರಿ. ನಿಮ್ಮ ಮುಂದಿನ ಭವಿಷ್ಯ ರೂಪಿಸಿಕೊಳ್ಳಿ ಎಂದು ಧೈರ್ಯ ತುಂಬಿದರು.

ಮಾ.30ರಂದು ಬಜೆಟ್ ಅಧಿವೇಶನ ಮುಗಿಯಲಿದೆ. ಯೋಜನೆಗಳನ್ನು ಅನುಷ್ಠಾನಕ್ಕೆ ತರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆಂದು ತಿಳಿಸಿದರು.

ಎರಡು ವರ್ಷಗಳ ಕಾಲ ಕೋವಿಡ್ ಇದ್ದ ಕಾರಣ ಯಾವುದೇ ಅಭಿವೃದ್ಧಿ ಆಗಿಲ್ಲ, ಇದು ಅಭಿವೃದ್ಧಿ ಕಾಲ ಆಗಿರುವುದರಿಂದ, ಆದಷ್ಟು ಬೇಗ ಅಭಿವೃದ್ಧಿಗೆ ವೇಗ ಹೆಚ್ಚಲಿದೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿ ಪರ್ವ ಆರಂಭಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Comments are closed.